ಅಜ್ಜಾವರ ಗ್ರಾಮದ ಅಡ್ಪಂಗಾಯ ಎಂಬಲ್ಲಿ ಗುಟ್ಕಾ ಮಾರಾಟದ ಕುರಿತು ದೂರಿನ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ 3 ಅಂಗಡಿಗಳಿಗೆ ಬೀಗ ಜಡಿದ ಘಟನೆ ಅ 10 ರಂದು ಸಂಜೆ ವರದಿಯಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಅಡ್ಡಂಗಾಯ ಎಂಬಲ್ಲಿ ಅಂಗಡಿಗಳಲ್ಲಿ ಗುಟ್ಕಾ ಮಾರಾಟ ಕುರಿತು ಹಿರಿಯ ಅಧಿಕಾರಿಗಳಿಗೆ ದೂರು ಸಲ್ಲಿಕೆಯಾದ ಹಿನ್ನಲೆಯಲ್ಲಿ ದಾಳಿ ನಡೆಸಿದ ಸುಳ್ಯ ಪೊಲೀಸ್ ಅಧಿಕಾರಿಗಳು ದಂಡ ವಿಧಿಸಲಾಗಿತ್ತು.















ಬಳಿಕ ಮತ್ತದೇ ಅಂಗಡಿಯ ಮಾಲಿಕರು ತಂಬಾಕು ಪದಾರ್ಥಗಳ ವಸ್ತುಗಳನ್ನು ಮಾರಾಟ ಮಾಡಿದ್ದಾರೆ ಎಂಬ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಅಂಗಡಿಗಳ ಪರವಾನಿಗೆ ರದ್ದತಿಗೆ ಪಂಚಾಯತ್ ಗೆ ದೂರು ಕಳುಹಿಸಲಾಗಿತ್ತು.
ಆದರೆ ಸ್ಥಳೀಯ ಗ್ರಾಮ ಪಂಚಾಯತ್ ಮುಚ್ಚಳಿಕೆ ಬರೆಸಿಕೊಂಡು ಅಂಗಡಿ ತೆರೆಯಲು ಮತ್ತೆ ಅವಕಾಶ ಕಲ್ಪಿಸಲಾಗಿದ್ದು ಇದನ್ನರಿತ ಪೋಲಿಸ್ ಅಧಿಕಾರಿಗಳು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳ ಗಮನಕ್ಕೆ ತಂದು ತಾತ್ಕಾಲಿಕ ಅಂಗಡಿಗಳನ್ನು ಮುಚ್ಚಿಸಲು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಹಿರಿಯ ಅಧಿಕಾರಿಗಳಿಗೆ ದೂರು ಸಲ್ಲಿಕೆಯಾದ ಬಳಿಕವೂ ನಾಲ್ಕು ದಿನಗಳ ಅಂತರದಲ್ಲಿ ಎರಡೆರಡು ಬಾರಿ ನಿಯಮ ಉಲ್ಲಂಘಿಸಿ ಗುಟ್ಕಾ ಪದಾರ್ಥಗಳ ಮಾರಾಟ ಮಾಡಿದ್ದು ಇದು ಮಕ್ಕಳ ಮೇಲೆ ಪರಿಣಾಮ ಬೀರಬಹುದಾಗಿದೆ ಈ ಹಿನ್ನಲೆಯಲ್ಲಿ ಈ ಕ್ರಮಕ್ಕಾಗಿ ತಾ.ಪಂ ಕಾರ್ಯನಿರ್ವಾಹಣಾ ಅಧಿಕಾರಿಗಳು ತಾತ್ಕಾಲಿಕವಾಗಿ ತಡೆ ನೀಡಿ ಮುಚ್ಚಿಸಲಾಗಿದೆ ಎಂದು ತಿಳಿದು ಬಂದಿದೆ.










