ಸುಳ್ಯ ರೋಟರಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ ನಡೆಯಿತು.















ರೋಟರಿ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಮೇಜರ್ ಡೋನರ್ ರೊ.ಡಾ। ರಾಮ್ ಮೋಹನ್ ರವರು ಸಭಾಧ್ಯಕ್ಷತೆಯನ್ನು ವಹಿಸಿ, ಮಾತನಾಡುತ್ತಾ, ಮುಂದಿನ ದಿನಗಳಲ್ಲಿ ವಿದ್ಯಾಸಂಸ್ಥೆಯಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕ್ರೀಡಾಕೂಟ ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನಡೆಯಬೇಕಿದೆ ಎಂದರು.
ವಿದ್ಯಾಸಂಸ್ಥೆಯ ಸಂಚಾಲಕರಾದ ರೊ.ಎಂ.ಪಿ.ಪಿ.ಹೆಚ್.ಎಫ್ . ಪ್ರಭಾಕರನ್ ನಾಯರ್ ಪ್ರಾಸ್ತಾವಿಕ ವಾಗಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ತಾಲೂಕು ಕ್ರೀಡಾಕೂಟದ ಸಂಚಾಲಕರೂ, ನೆಹರೂ ಮೆಮೊರಿಯಲ್ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ವಸಂತ ಎ. ಸಿ . ತಾಲೂಕು ಕ್ರೀಡಾಕೂಟದ ಬಗ್ಗೆ ಮಾತನಾಡಿದರು.

ಆಡಳಿತ ಮಂಡಳಿಯ ಸದಸ್ಯರಾದ ರೊ.ಪಿ.ಪಿ.ಪಿ.ಹೆಚ್.ಎಫ್. ಸವಣೂರು ಸೀತಾರಾಮ.ರೈ. ಯವರು ಸಂಧರ್ಭೋಚಿತವಾಗಿ ಮಾತನಾಡಿದರು. ಆಡಳಿತ ಮಂಡಳಿಯ ಸದಸ್ಯರಾದ ರೊ.ಪಿ.ಪಿ.ಪಿ.ಹೆಚ್.ಎಫ್. ಆನಂದ ಖಂಡಿಗ,ರೊ.ಪಿ.ಪಿ.ಪಿ.ಹೆಚ್.ಎಫ್. ಡಾ। ಪುರುಷೋತ್ತಮ. ಕೆ. ರೊ.ಮಧುಸೂದನ್. ಕುಂಭಕೋಡು, ರೊ.ಹರಿರಾಯ ಕಾಮತ್, ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು , ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಜ್ಯೋತ್ಸ್ನಾ, ಪ್ರೌಢ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಶೇಡಿಕಜೆ, ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಹರ್ಷಿತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತಾಲೂಕು ಕ್ರೀಡಾಕೂಟದ ಕಾರ್ಯಕಾರಿ ಸಮಿತಿಗೆ ಪೋಷಕ ಪ್ರತಿನಿಧಿಗಳ ಆಯ್ಕೆ ಮಾಡಲಾಯಿತು. ಪೋಷಕರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿದರು.
ಶಿಕ್ಷಕಿಯರಾದ ಶ್ರೀಮತಿ ಮಲ್ಲಿಕಾ,ಶ್ರೀಮತಿ ಸಂಗೀತಾ,ಶ್ರೀಮತಿ ಶಾಲಿನಿ ರಾಮಕೃಷ್ಣ ಪ್ರಾರ್ಥಿಸಿದರು. ಶಿಕ್ಷಕಿಯರಾದ ಶ್ರೀಮತಿ ಸವಿತಾ ಜಿ.ಡಿ. ಹಾಗೂ ಕು.ದೀಕ್ಷಿತ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ನಳಿನಿ ಹಾಗೂ ಉಪನ್ಯಾಸಕಿ ಶ್ರೀಮತಿ ಮೌಸಮಿ ವಂದಿಸಿದರು. ಶಿಕ್ಷಕಿಯರಾದ ಶ್ರೀಮತಿ ರಶ್ಮಿ ಎಸ್. ಎನ್ ಹಾಗೂ ಶ್ರೀಮತಿ ನಳಿನಾಕ್ಷಿ ಕಲ್ಮಡ್ಕ ಕಾರ್ಯಕ್ರಮ ನಿರೂಪಿಸಿದರು.










