ಸುಬ್ರಹ್ಮಣ್ಯ: “ನಮ್ಮ ನಡೆ ಪ್ಲಾಸ್ಟಿಕ್ ಮುಕ್ತದೆಡೆಗೆ” ಅಭಿಯಾನ

0

ಆ.15 ರಿಂದ ಸುಬ್ರಹ್ಮಣ್ಯ ದೇವಾಲಯ, ದೇವಾಲಯ ವ್ಯಾಪ್ತಿಯ ಅಂಗಡಿಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಆದೇಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಧೀನದ ಎಲ್ಲಾ ಅಂಗಡಿ ಕಟ್ಟಡದ ಬಾಡಿಗೆದಾರ / ವ್ಯಾಪಾರಸ್ಥರಿಗೆ ಆ. 15 ರಿಂದ ದೇವಸ್ಥಾನಗಳಲ್ಲಿ ಹಾಗೂ ದೇವಸ್ಥಾನದ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ಆದೇಶ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ದೇವಸ್ಥಾದ ವ್ಯಾಪಿಯ ಎಲ್ಲಾ ಅಂಗಡಿಗಳಿಗೆ ನೋಟೀಸ್ ನೀಡಲಾಗಿರುವುದಾಗಿ ತಿಳಿದು ಬಂದಿದೆ. ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆ ಅನ್ವಯ ದೇವಳದ ಎಲ್ಲಾ ವ್ಯಾಪಾರದ ಅಂಗಡಿ ಕಟ್ಟಡಗಳಲ್ಲಿ ಹಾಗೂ ಆವರಣಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಹಾಗೂ ಪ್ಲಾಸ್ಟಿಕ್ ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದನ್ನು ಆದೇಶವನ್ನು ಉಲ್ಲಂಘಿಸಿದಲ್ಲಿ ದಂಡನೆಯನ್ನು ವಿಧಿಸಲಾಗುವುದು ಹಾಗೂ ಅಂಗಡಿಗಳನ್ನು ತೆರವುಗೊಳಿಸುವಂತೆ ಅಥವಾ ಮುಚ್ಚಿಸುವಲ್ಲಿ ಸೂಕ್ತ ಕ್ರಮ ವಹಿಸಲಾಗುವುದು ಎಂಬುದಾಗಿ ನೋಟಿಸ್ ನಲ್ಲಿ ತಿಳಿಸಲಾಗಿದೆ.

“ನಮ್ಮ ನಡೆ ಪ್ಲಾಸ್ಟಿಕ್ ಮುಕ್ತದೆಡೆಗೆ” ಅಭಿಯಾನದ ಮೂಲಕ ಪ್ಲಾಸ್ಟಿಕ್ ಮುಕ್ತ ದೇವಸ್ಥಾನವನ್ನಾಗಿ ಘೋಷಣೆಯನ್ನು ಮಾಡಲಾಗುವುದು ಎಂದು ದೇವಾಲಯದ ಆಡಳಿತ ಮಂಡಳಿ ಮತ್ತು ಕಾರ್ಯನಿರ್ವಾಹಣಾಧಿಕಾರಿಯವರ ಆದೇಶದಲ್ಲಿ ತಿಳಿಸಲಾಗಿದೆ.