ಭಕ್ತಾದಿಗಳು ಸಹಕರಿಸಲು ವಿನಂತಿ
ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದಲ್ಲಿ ಸರಕಾರದ ಆದೇಶದಂತೆ ಮತ್ತು ರಾಜ್ಯ ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆ ಪ್ರಕಾರ ಆ.15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಲಾಗುವುದು. ಅಲ್ಲದೆ ಈ ಮೂಲಕ ನಮ್ಮ ನಡೆ ಪ್ಲಾಸ್ಟಿಕ್ ಮುಕ್ತದೆಡೆಗೆ ಅಭಿಯಾನಕ್ಕೆ ಪುಣ್ಯಕ್ಷೇತ್ರದಲ್ಲಿ ಚಾಲನೆ ನೀಡಲಾಗುವುದು.ಸಾರ್ವಜನಿಕರು ಸರ್ವ ರೀತಿಯ ಸಹಕಾರ
ಪ್ಲಾಸ್ಟಿಕ್ ಬಳಕೆ ಹತ್ತಿಕ್ಕಲು ದೇವಳದೊಂದಿಗೆ ಕೈ ಜೋಡಿಸಬೇಕೆಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ದೇವಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಸರಕಾರ ಅಧಿಸೂಚನೆಯಂತೆ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ಉತ್ಪಾದನೆ ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಕಡ್ಡಾಯವಾಗಿ ಆ.15ರಿಂದ ನಿಷೇಧಿಸಲಾಗುತ್ತದೆ.
ದೇವಸ್ಥಾನಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ರೀತಿಯ ಪ್ಲಾಸ್ಟಿಕ್ ಸಾಮಾಗ್ರಿಗಳ ಬಳಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುತ್ತದೆ.















ದೇವಳದ ಪರಿಸರದ ಅಂಗಡಿ,
ವಾಣಿಜ್ಯ ಸಂಕೀರ್ಣಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್‌ಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗುತ್ತದೆ. ಬಳಕೆ ಕಂಡು ಬಂದಲ್ಲಿ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾಯ್ದೆಗಳ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ದೇಗುಲದಲ್ಲಿ ಮಹಾಪೂಜೆ ಮತ್ತು ರುದ್ರಾಭಿಷೇಕ ಮಾಡಿದ ಭಕ್ತರಿಗೆ ತೀರ್ಥಪ್ರಸಾದ ಬೇಕಾದವರು ಸ್ಟೀಲ್ ಪಾತ್ರೆಗಳನ್ನು ತರತಕ್ಕದ್ದು. ತೀರ್ಥವನ್ನು ಪ್ಲಾಸ್ಟಿಕ್ ಬಾಟಲಿಯಲ್ಲಿ ಕೊಡುವುದನ್ನು ಆ.15ರಿಂದ ನಿಲ್ಲಿಸಲಾಗುತ್ತದೆ.ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










