ಶ್ರೀ ಶಾರದಾ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿ ೭೯ನೆಯ ಸ್ವಾತಂತ್ರ್ಯ ದಿನಾಚರಣೆಯು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯರವರು ಧ್ವಜಾರೋಹಣವನ್ನು ನೆರವೇರಿಸಿದರು.















ನಂತರ ನಡೆದ ಸಮಾರಂಭದಲ್ಲಿ ಶ್ರೀಯುತರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸ್ವಾತಂತ್ರಕ್ಕೋಸ್ಕರ ಹೋರಾಡಿದ ನಾಯಕರುಗಳನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮುಂದೆ ಬಲಿಷ್ಠ ನಾಯಕರುಗಳಾಗಿ ದೇಶವನ್ನು ಸದೃಢ ಗೊಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕೆಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ದಯಮಣಿ.ಕೆ ಸ್ವಾಗತಿಸಿ, ಮುಖ್ಯೋಪಾಧ್ಯಾಯನಿ ಶ್ರೀಮತಿ ಭಾರತಿ. ಪಿ ರವರು ವಂದಿಸಿದರು. ಸಂಸ್ಥೆಯ ಎಲ್ಲಾ ಬೋಧಕ, ಬೋಧಕೇತರ, ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.










