
ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ -79 ನೇ ಸ್ವಾತಂತ್ರೋತ್ಸವ ಜರುಗಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಮಿತಾ ಎಲ್ ರೈ ಧ್ವಜರೋಹಣ ನೆರವೇರಿಸಿದರು.















ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ ಪನ್ನೆ, ರೋಟರಿ ಕ್ಲಬ್ ಅಧ್ಯಕ್ಷರಾದ ವಿಶ್ವನಾಥ ಪೂಜಾರಿ ಕೆ, ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಆರ್.ಕೆ ಭಟ್ ಕುರುoಬುಡೇಲು ಅತಿಥಿಗಳಾಗಿ ಭಾಗವಹಿಸಿದ್ದರು. ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ದೇವಿಕಾ ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭಾರತಿ ಕೆ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.










