














ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘಟನೆಯಾದ
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ .ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಸುಳ್ಯ ವಲಯದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವವನ್ನು ಸುಳ್ಯದ ದ. ಕ. ಜಿ. ಪಂ.ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನಾಗಪಟ್ಟಣದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯವರು ಹಾಗೂ ಮಕ್ಕಳೊಂದಿಗೆ ಆಚರಿಸಲಾಯಿತು . ನಮ್ಮ ವಲಯದ ವತಿಯಿಂದ ಶಾಲಾ ಮಕ್ಕಳಿಗೆ ಸಿಹಿ ತಿಂಡಿ ಹಾಗೂ ಉಡುಗೊರೆಯನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷರಾದ ಶಶಿ ಗೌಡ ವಲಯದ ಮಾಜಿ ಅಧ್ಯಕ್ಷರಾದ ಹಾಗೂ ಸ್ಥಾಪಕ ಅಧ್ಯಕ್ಷರಾದ ಗೋಪಾಲ್ ಸುಳ್ಯ ಜಿಲ್ಲಾ ಪ್ರತಿನಿಧಿ ಹರೀಶ್ ರಾವ್ ಕೋಶಾಧಿಕಾರಿ ವೆಂಕಟೇಶ್ ಉಪಾಧ್ಯಕ್ಷರಾದ ಪ್ರಶಾಂತ್ ಶೇಣಿ ಹಾಗೂ ವಲಯದ ಸರ್ವ ಸದಸ್ಯರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು. ಹಾಗೂ ಮಕ್ಕಳೊಂದಿಗೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ವಲಯದ ಅಧ್ಯಕ್ಷರು ಸ್ವಾತಂತ್ರೋತ್ಸವದ ಬಗ್ಗೆ ಮಾತನಾಡಿ ಎಲ್ಲರಿಗೂ ಶುಭ ಕೋರಿದರು. ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಅಧ್ಯಾಪಕ ವೃಂದದವರು ನಮ್ಮ ಸಂಘಟನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.










