ಕಲ್ಲುಗುಂಡಿಯ ಕಡೆಪಾಲ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿ ಬಿಟ್ಟು ಚರಂಡಿಗೆ ಇಳಿದ ಘಟನೆ ಆ.15 ರಂದು ಸಂಭವಿಸಿದೆ.















ಮಡಿಕೇರಿಯಿಂದ ಕಾಸರಗೋಡಿಗೆ ಬರುತ್ತಿದ್ದ ಕಾರು ಕೆ. ಎ 51ಎಂ.ವಿ 4150 ಕಾರು ಕಡೆಪಾಲ ಬಳಿ ತಲುಪಿದಾಗ ಒಮ್ಮಿಂದೊಮ್ಮೆಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಿಟ್ಟು ಪಕ್ಕದ ಚರಂಡಿಗೆ ಇಳಿದಿದೆ. ಪರಿಣಾಮವಾಗಿ ಕಾರಿನಲ್ಲಿದ್ದರವರು ಅಪಾಯದಿಂದ ಪಾರಾಗಿದ್ದು, ಕಾರಿನಲ್ಲಿದ್ದ ಓರ್ವ ಮಹಿಳೆಗೆ ಸಣ್ಣ ಪುಟ್ಟ ಗಾಯವಾಗಿದ್ದು, ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಕಾರಿನ ಮುಂಭಾಗ ಜಖಂಗೊಂಡಿದೆ.










