ಗುತ್ತಿಗಾರು ಸರಕಾರಿ ಪಿಎಂಶ್ರೀ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ

0

ಸರಕಾರಿ ಮಾದರಿ ಹಿರಿಯ ಪಿಎಂಶ್ರೀ ಶಾಲೆ ಗುತ್ತಿಗಾರು ಇಲ್ಲಿ 79ನೇ ವರ್ಷದ ಸ್ವಾತಂತ್ರ್ಯೋತ್ಸವದ ಆಚರಣೆಯನ್ನು ಮಾಡಲಾಯಿತು.

ಧ್ವಜಾರೋಹಣವನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ನೆರವೇರಿಸಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಬಲಿದಾನಗೈದ ನೇತಾರರನ್ನು ಸ್ಮರಿಸಿಕೊಂಡರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾವತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಮುತ್ಲಾಜೆ ಸೇರಿದಂತೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರುಗಳು, ಮಕ್ಕಳ ಪೋಷಕರು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಅಕ್ಷರ ದಾಸೋಹ ಸಿಬ್ಬಂದಿಗಳು, ಮಕ್ಕಳು ಸೇರಿದಂತೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶಾಲಾ ಮಕ್ಕಳು ಪೇಟೆಯುದ್ಧಕ್ಕೂ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು.

ಮೆರವಣಿಗೆಯಲ್ಲಿ ಮಕ್ಕಳ ಸ್ತಬ್ಧ ಚಿತ್ರಗಳು, ವೇಷ ಭೂಷಣಗಳು ನೊಡುಗರ ಗಮನ ಸೆಳೆಯಿತು. ಶಾಲಾ ಮಕ್ಕಳು ವಿವಿಧ ಕವಾಯತ್ ನಡೆಸಿದರು.

ಚಿತ್ರ, ವರದಿ : ಡಿ. ಹೆಚ್