ಸರಕಾರಿ ಪ್ರೌಢಶಾಲೆ ಮರ್ಕಂಜದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಎಸ್ ಡಿ ಎಂ ಸಿ ಅಧ್ಯಕ್ಷರಾದ ನಿತ್ಯಾನಂದ ಭೀಮ ಗುಳಿಯವರು ಧ್ವಜಾರೋಹಣ ಗೈದರು.
















ಈ ಸಂದರ್ಭ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಹರೀಶ್ ಕಂಜಿಪಿಲಿ , ಎಸ್ ಡಿ ಎಂ ಸಿ ಯ ಸದಸ್ಯರು, ಶಿಕ್ಷಕ ವೃಂದದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷರಾದ ನಿತ್ಯಾನಂದ ಭೀಮ ಗುಳಿ ವಹಿಸಿದ್ದರು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವೀಣಾ ಎಂಟಿ ಎಸ್‌ಡಿಎಂಸಿಯ ಎಲ್ಲಾ ಸದಸ್ಯರುಗಳು ಹಾಗೂ ವಿದ್ಯಾರ್ಥಿ ನಾಯಕಿ ಕುಮಾರಿ ಸುಭಿಕ್ಷ ಇವರು ಉಪಸ್ಥಿತರಿದ್ದರು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ಪರ್ಧೆಗಳ ಬಹುಮಾನವನ್ನು ಈ ಸಂದರ್ಭ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಭವಿಷ್ಯ ಡಿ ಜಿ ಸ್ವಾಗತಿಸಿ, ಖುಷಿ ಸಿ ವಿ ವಂದನಾರ್ಪಣೆಗೈದರು. ಕುಮಾರಿ ಸಮಿತ ಹಾಗೂ ಪೂಜಾ ಬಿ ಎನ್ ಅವರು ಕಾರ್ಯಕ್ರಮ ನಿರೂಪಿಸಿದರು.










