
ಬಾಳಿಲ ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಗಳ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ – ಸಭಾ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ರಾಧಾಕೃಷ್ಣ ರಾವ್ ಯುರವರ ಅಧ್ಯಕ್ಷತೆಯಲ್ಲಿ ನಡೆಯಿತು.
ವೇದಿಕೆಯಲ್ಲಿ ವಿಶೇಷ ಆಹ್ವಾನಿತರಾಗಿ ಸಂಸ್ಥೆಯ ಹಿರಿಯ ವಿದ್ಯಾರ್ಥಿ, ಕೆವಿಜಿ ಐಟಿಐ ನಿವೃತ್ತ ಪ್ರಾಂಶುಪಾಲರಾದ ಚಿದಾನಂದ ಗೌಡ ಬಾಳಿಲ, ಭಾಗವಹಿಸಿದ್ದರು.















ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಪಿ.ಜಿ.ಎಸ್.ಎನ್ ಪ್ರಸಾದ್, ಪ್ರಾಥಮಿಕ ಶಾಲಾ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸೀತಾರಾಮ ಕಾಯಾರ, ಪ್ರೌಢಶಾಲಾ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷೆ ಹರಿಣಾಕ್ಷಿ ಬರೆಮೇಲು, ಪ್ರೌಢ ಶಾಲಾ ವಿಭಾಗದ ಪಿ.ಟಿ.ಎ ಅಧ್ಯಕ್ಷರಾದ ರಾಮಚಂದ್ರ ಕೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ತಾಲೂಕು ಮಟ್ಟದ ಕರಾಟೆ ಮತ್ತು ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಕೆನರಾ ಬ್ಯಾಂಕ್, ಬೆಳ್ಳಾರೆ ಶಾಖೆ ವತಿಯಿಂದ ನೀಡಲ್ಪಡುವ ಪರಿಶಿಷ್ಟ ಪಂಗಡ / ಜಾತಿಯ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಮುಖ್ಯ ಶಿಕ್ಷಕರಾದ ಉದಯಕುಮಾರ್ ರೈ ಎಸ್ ಸ್ವಾಗತಿಸಿ, ಸಹಶಿಕ್ಷಕಿ ಸಹನಾ ಬಿ.ಬಿ. ವಂದಿಸಿದರು. 10ನೇ ತರಗತಿ ವಿದ್ಯಾರ್ಥಿಗಳಾದ ಮನಸ್ವಿ ಎನ್ ಮತ್ತು ಪ್ರದೀಪ್ ಕೆ ಕಾರ್ಯಕ್ರಮ ನಿರೂಪಿಸಿದರು.
ಬೆಳಗ್ಗೆ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ಪ್ರತ್ಯೇಕವಾಗಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ಧ್ವಜಾರೋಹಣಗೈದು, ಧ್ವಜ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಮತ್ತು ಪಿ ಟಿ ಎ ಪದಾಧಿಕಾರಿಗಳು, ಪೋಷಕರು,ಬಾಳಿಲ ಅಂಗನವಾಡಿಯ ಸಿಬ್ಬಂದಿ ವರ್ಗದವರು,ಪುಟಾಣಿ ಮಕ್ಕಳು, ಶಾಲಾ ಶಿಕ್ಷಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.










