ಬಾಳಿಲದ ಮರೆಂಗಾಲ (ಕೊಡೆಂಕಿರಿ) ದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

0

ಶ್ರೀಕೃಷ್ಣ ಜನ್ಮಾಷ್ಟಮಿ ಸೇವಾ ಟ್ರಸ್ಟ್ ಕೊಡಂಕಿರಿ, ಮರೆಂಗಾಲ ಇದರ ಆಶ್ರಯದಲ್ಲಿ 17ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮ ಆ.
15ರಂದು ನಡೆಯಿತು.


ಬೆಳಿಗ್ಗೆ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಆಡಳಿತ ಧರ್ಮದರ್ಶಿ ಪರಮೇಶ್ವರಯ್ಯ ಕಾಂಚೋಡು ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಯೋಧ ಹೊನ್ನಪ್ಪ ಗೌಡ ದೇರಂಪಾಲು, ಅಶೋಕ್ ಶೆಟ್ಟಿ ಅರ್ಚನಾ, ಟ್ರಸ್ಟ್ ನ ಹಿರಿಯ ಸದಸ್ಯ ಕುಶಾಲಪ್ಪ ಪೂಜಾರಿ ಕೊಡೆಂಕಿರಿ ಮತ್ತು ಟ್ರಸ್ಟ್ ನ ಅಧ್ಯಕ್ಷ ಬಾಲಕೃಷ್ಣ ಮರೆಂಗಾಲ ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಕ್ಕಳಿಗೆ, ಪುರುಷರಿಗೆ ಮತ್ತು ಮಹಿಳೆಯರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು. ಸಂಜೆ ಟ್ರಸ್ಟ್ ನ ಅಧ್ಯಕ್ಷ ಬಾಲಕೃಷ್ಣ ಮರೆಂಗಾಲರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು.

ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿ ಅಧ್ಯಕ್ಷ ಯು. ರಾಧಾಕೃಷ್ಣ ರಾವ್, ಬಾಳಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಪಾವನ ಜೋಗಿಬೆಟ್ಟು, ಉಪಾಧ್ಯಕ್ಷ ರಮೇಶ್ ರೈ ಅಗಲ್ಪಾಡಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಶ್ರೀಮತಿ ಪ್ರವೀಣ ಪ್ರಶಾಂತ್ ರೈ ಮರುವಂಜ, ನಾಗರಿಕ ಸೇವಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ಅಧ್ಯಕ್ಷ ದಿವಾಕರ ಎಂ ಅತಿಥಿಗಳಾಗಿ ಭಾಗವಹಿಸಿದ್ದರು.

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕ ಯಶೋಧರ ನಾರಾಲು, ವಿದ್ಯಾಬೋಧಿನೀ ಹಿ.ಪ್ರಾ. ಶಾಲಾ ನಿವೃತ್ತ ಶಿಕ್ಷಕ ವೈ.ಬಿ ಸುಬ್ಬಯ್ಯ ಮತ್ತು ಪಿಯುಸಿ ಸಾಧಕ ವಿದ್ಯಾರ್ಥಿ ಲಿಖಿತ್ ಎಂ. ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಹರ್ನಿಶಿ ದುಡಿದ ಕುಶಾಲಪ್ಪ ಪೂಜಾರಿ ಮತ್ತು ಅವರ ಪತ್ನಿ ಶ್ರೀಮತಿ ಉಮಾವತಿಯರನ್ನು ವೇದಿಕೆಯಲ್ಲಿ ಸನ್ಮಾನಿಸಿದರು. ಕಾರ್ಯಕ್ರಮದ ಯಶಸ್ಸಿಗಾಗಿ ಸೇವೆ ಸಲ್ಲಿಸಿದ ಹಲವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು. ರಮೇಶ್ ಗೌಡ ಮರೆಂಗಾಲ ಸ್ವಾಗತಿಸಿ, ಟ್ರಸ್ಟ್ ನ ಕಾರ್ಯದರ್ಶಿ ನಾಗರಾಜ್ ಎಂ. ವಂದಿಸಿದರು. ರಾಜೇಶ್ ಸುವರ್ಣ ಅಯ್ಯನಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ ನೇತೃತ್ವದ ಮಕ್ಕಳ ತಂಡದಿಂದ ಯಕ್ಷಗಾನ ಗಜೇಂದ್ರ ಮೋಕ್ಷ ನಡೆಯಿತು.