ಎಡಮಂಗಲ ಗ್ರಾಮ ಪಂಚಾಯತಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

0

ಎಡಮಂಗಲ ಗ್ರಾಮ ಪಂಚಾಯತಿನಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತೀಯ ಸೇನೆಯ ಹವಾಲ್ದಾರ್ ಗಣೇಶ್ ದೇರ್ಲರನ್ನು ಸನ್ಮಾನಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಣ್ಣ ಜಾಲ್ತಾರು ಧ್ವಜಾರೋಹನ ನೆರವೇರಿಸಿದರು.

ಗ್ರಾಮ ಪಂಚಾಯತ್ ಸದಸ್ಯರು, ಸ್ನೇಹ ಸಂಜೀವಿನಿ ಅಧ್ಯಕ್ಷರು, ರಿಕ್ಷಾ ಚಾಲಕ ಮತ್ತು ಮಾಲಕರು, ಗ್ರಾಮಸ್ಥರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಪಂಚಾಯತ್ ಸಿಬ್ಬಂದಿ ವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.