ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ . 2024- 25 ಸಾಲಿನ 8 ನೇ ವಾರ್ಷಿಕ ಮಹಾಸಭೆಯು ಆ .17 ರಂದು ಕುಂಬಳ ಚೇರಿ ಸಂಘದ ಸಭಾಂಗಣದಲ್ಲಿ ನಡೆಯಿತು.

ಪ್ರಾಥಮಿಕ ಕೃಷಿ ಪತ್ತಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಸಿ. ಹೆಚ್ ಲೆಕ್ಕಪತ್ರ ಬಗ್ಗೆ ವರದಿಯನ್ನು ಮಂಡಿಸಿದರು. ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅಧ್ಯಕ್ಷೀಯ ಭಾಷಣವನ್ನು ಮಾಡಿದರು. ಬಳಿಕ ಸಂಘದ ಮೃತಪಟ್ಟ ಸದಸ್ಯರಿಗೆ , ಸದಸ್ಯರಿಗೆ ಒಂದು ನಿಮಿಷ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಬಳಿಕ ಸಂಘದ ಅಭಿವೃದ್ಧಿ ಹಾಗೂ ವಿವಿಧ ವಿಷಯಗಳ ಬಗ್ಗೆ ಕುರಿತು ಚರ್ಚೆ ನಡೆಯಿತು.















ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಅಶೋಕ್ ಪಿ. ಎಂ ,ಜಯರಾಮ ನಿಡ್ಯಮಲೆ ಬಿ, ಸೀತಾರಾಮ ಕದಿಕಡ್ಕ, ಧನಂಜಯ ಕೋಡಿ, ಪ್ರಮೀಳ ಬಂಗಾರಕೋಡಿ, ಪುಷ್ಪಾವತಿ ವ್ಯಾಪಾರೆ, ಪ್ರದೀಪ ಕೆ.ಎಂ, ದೀನರಾಜ್ ದೊಡ್ಡಡ್ಕ, ಶೇಷಪ್ಪ ನಾಯ್ಕ ನಿಡ್ಯಮಲೆ, ಜಯರಾಮ ಪಿ. ಟಿ, ಕಿರಣ್ ಬಂಗಾರಕೋಡಿ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಶಾಖಾ ವ್ಯವಸ್ಥಾಪಕರಾದ ವಿನೀತಾ
ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಘದ ಸರ್ವ ಸದಸ್ಯರು, ಪದಾಧಿಕಾರಿಗಳು , ಸಿಬ್ಬಂದಿ ವರ್ಗ, ಊರಿನವರು ಉಪಸ್ಥಿತರಿದ್ದರು
ಗೌತಮ್ ಸುಭಾಷ್ ಬಂಗಾರ ಕೋಡಿ ಪ್ರಾರ್ಥಿಸಿ , ಲೋಕೇಶ್ ಸಿ. ಹೆಚ್ ಸರ್ವರನ್ನು ಸ್ವಾಗತಿಸಿ ನಿರ್ದೇಶಕರಾದ ಪ್ರಮೀಳಾ ಬಂಗಾರಕೋಡಿ ಅವರು ಸರ್ವರನ್ನು ವಂದಿಸಿದರು. ಕೊನೆಯಲ್ಲಿ ರಾಷ್ಟ್ರಗೀತೆ ಹಾಡುವುದರ ಮೂಲಕ ಸಭೆಯು ಮುಕ್ತಾಯಗೊಂಡಿತು










