








ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕವು ಹಮ್ಮಿಕೊಂಡಿರುವ “ಚಿಣ್ಣರೊಂದಿಗೆ ಚಿಲಿಪಿಲಿ ಗಾನ – ಕತಾ -ಯಾನ” ಸರಣಿ ಕಾರ್ಯಕ್ರಮದ ಹತ್ತನೇ ಕಾರ್ಯಕ್ರಮವು ಆ. 16 ರಂದು ಗೂನಡ್ಕದ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಶ್ರೀಮತಿ ಚಂದ್ರಾವತಿ ಬಡ್ಡಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿ ಮಕ್ಕಳಿಗೆ ಕತೆ ಹೇಳಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮಮತಾ ರವೀಶ್ ಭಾಗವಹಿಸಿ ಮಕ್ಕಳಿಗೆ ಹಾಡು ಹಾಗೂ ಅಭಿನಯಗೀತೆಗಳನ್ನು ಹೇಳಿ ರಂಜಿಸಿದರು.
ಶಾಲಾ ಮುಖ್ಯ ಶಿಕ್ಷಕ ಹನುಮಂತಪ್ಪ ಜಿ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಭವಿತಾ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಧನ್ಯಶ್ರೀ ವಂದಿಸಿದರು. ಶ್ರೀಮತಿ ಉಷಾಲತಾ ಕೆ ಸಹಕರಿಸಿದರು.










