ಪೈಚಾರ್: ಸಾಮಾಜಿಕ, ಕ್ರೀಡೆ, ಶೈಕ್ಷಣಿಕ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ಸೋಣಂಗೇರಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳಿಗೆ ಆರಂಭದಲ್ಲೇ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹಿಸುವ ಸಲುವಾಗಿ ಕುಳಿತುಕೊಳ್ಳುಲು ಆಸನದ ವ್ಯವಸ್ಥೆಯನ್ನು ಅಸ್ತ್ರ ಸ್ಪೋರ್ಟ್ಸ್ ಪೈಚಾರ್ ಸಂಘಟನೆ ಈ ಕೊಡುಗೆ ನೀಡಿದ್ದಾರೆ.
















ಈ ಸಂದರ್ಭದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಸಂಘಟನೆಯ ಅಧ್ಯಕ್ಷರಾದ ರಿಫಾಯಿ ಎಸ್ ಎ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಕುಸುಮಾವತಿ, ಅಂಗನವಾಡಿ ಶಿಕ್ಷಕಿ ರವಿಕಲ ಸಂಘಟನೆಯ ಪ್ರಧಾನ ಕಾರ್ಯದರ್ಶಿ ನಾಸಿರ್ ಕೆ.ಪಿ, ಜೊತೆ ಕಾರ್ಯದರ್ಶಿ ಝುಭೈರ್ ಶಾಂತಿನಗರ, ಹಾಗೂ ಸದಸ್ಯ ಅಶ್ರಫ್ ಪೈಚಾರ್ ಮತ್ತು ಶಾಲೆಯ ಸಹ ಶಿಕ್ಷಕರು ಉಪಸ್ಥಿತರಿದ್ದರು.










