ಬೆಳ್ಳಾರೆಯ ಪೆರುವಾಜೆ ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜ ಮತ್ತು ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ(KGTTI), ಮಂಗಳೂರು ಇವರ ಸಹಯೋಗದೊಂದಿಗೆ ಎರಡು ವರ್ಷಗಳಿಗೆ ಸಿಸ್ಕೋ ಐಟಿ ಎಸೆನ್ಷಿಯಲ್ ತರಬೇತಿಯ ಒಡಂಬಡಿಕೆ(MOU) ಕಾರ್ಯಕ್ರಮ ಆ. 19 ರಂದು ಕಾಲೇಜಿನ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಸೆಮಿನಾರ್ ಹಾಲ್ ನಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯ ನಿರ್ದೇಶಕರಾದ ಡಾ. ಗಿರಿಧರ್ ಸಾಲಿಯನ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಪದವಿ ಶಿಕ್ಷಣದೊಂದಿಗೆ ತಾಂತ್ರಿಕ ಕೌಶಲ್ಯಗಳನ್ನು ಮೈಗೂಡಿಸಿಕೊಂಡಲ್ಲಿ ಮುಂದಿನ ಔದ್ಯೋಗಿಕ ಜೀವನವನ್ನು ಯಶಸ್ವಿಯಾಗಿ ನಿಭಾಯಿಸಬಹುದು ಎಂದು ಹೇಳಿದರು.















ಕಾಲೇಜಿನ ಪ್ರಾಂಶುಪಾಲರಾದ ಬಾಲಸುಬ್ರಮಣ್ಯ ಪಿ. ಎಸ್. ರವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕಿ ಡಾ. ಸುಪ್ರಿಯಾ ಪಿ. ಆರ್. ಉಪಸ್ಥಿತರಿದ್ದರು.

ಪದವಿ ವಿಭಾಗದ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶದ ಸಂಚಾಲಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯೂ ಆಗಿರುವ ಡಾ. ರಾಮಚಂದ್ರ ಕೆ. ಇವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು, ಸಿಸ್ಕೋ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಸ್ನಾತಕ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










