ಮೂಡ್ನೂರು ಮರ್ಕಂಜ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯೋತ್ಸವದ ಆಚರಣೆ ಮತ್ತು ಗ್ರಂಥಾಲಯ ಉದ್ಘಾಟನಾ ಕಾರ್ಯಕ್ರಮ ಆ. 15ರಂದು ನಡೆಯಿತು.
ಎಸ್ ಡಿ ಎಂ ಸಿ ಅಧ್ಯಕ್ಷರಾದ ವಿಜಯಕುಮಾರ್ ಎ ಕೆ ಧ್ವಜಾರೋಹಣ ಮಾಡಿದರು.
ಊರಿನ ಹಿರಿಯರು ಪೋಷಕರು ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಭಾಗವಹಿಸಿದರು. ಬಳಿಕ ಸ್ವಾತಂತ್ರ್ಯೋತ್ಸವದ ಮೆರವಣಿಗೆ ನಡೆಯಿತು.















ಕಾರ್ಯಕ್ರಮ ಉದ್ಘಾಟನೆಯನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನವೀನ್ ನಳಿಯಾರ್ ನೆರವೇರಿಸಿದರು.

ವೇದಿಕೆಯಲ್ಲಿ ಎಸ್ಡಿಎಂಸಿ ಉಪಾಧ್ಯಕ್ಷರಾದ ಶ್ರೀಮತಿ ಸುಜಾತ ಕುಮಾರಿ ಹಾಗೂ ಪ್ರಾ. ಕೃಷಿ ಪತ್ತಿನ ಸ. ಸಂಘದ ನಿರ್ದೇಶಕರಾದ ನವೀನ್ ದೊಡ್ಡಿತ್ಲು ಹಾಗೂ ಅಂಬೇಡ್ಕರ್ ರಕ್ಷಣಾ ಘಟಕದ ಅಧ್ಯಕ್ಷರಾದ ನವೀನ್ ಹಾಗೂ ಒಡಿಯೂರು ಸ್ವಸಹಾಯ ಸಂಘದ ಮೇಲ್ವಿಚಾರಕರಾದ ಕವಿತಾ ಹಾಜರಿದ್ದರು. ಮುಖ್ಯ ಗುರುಗಳಾದ ದೇವರಾಜ್ ಎಸ್ ಕೆ ಪ್ರಾಸ್ತಾವಿಕ ಹಾಗೂ ಸ್ವಾಗತ ಮಾಡಿದರು. ಶಿಕ್ಷಕಿ ಶ್ರೀಮತಿ ಯಶಸ್ವಿನಿ ಸ್ವಾತಂತ್ರ್ಯೋತ್ಸವದ ಬಗ್ಗೆ ಮಕ್ಕಳಿಗೆ ಭಾಷಣ ಮಾಡಿದರು. ಶಿಕ್ಷಕಿ ಅಶ್ವಿನಿ ಎಂ ದತ್ತು ನಿಧಿ ದಾನಿಗಳು ನೀಡಿದ ಬಹುಮಾನ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ
ಪ್ರಶಾಂತ್ ಕಾರ್ಯಕ್ರಮ ನಿರೂಪಿದರು. ಸವಿತಾ ಕುಮಾರಿ ಎಸ್ ಕೆ ಧನ್ಯವಾದ ಸಮರ್ಪಣೆ ಮಾಡಿದರು. ಇದೇ ಸಂದರ್ಭ
12 ಗಂಟೆಗೆ ಸರಿಯಾಗಿ ಗ್ರಾಮ ಪಂಚಾಯಿತಿ ವತಿಯಿಂದ ನೀಡಿದ ಗ್ರಂಥಾಲಯ ಉದ್ಘಾಟನೆ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಗೀತಾ ಹೊಸೋಳಿಕೆ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಗೋವಿಂದ ಅಳವುಪಾರೆ, ಗ್ರಂಥಪಾಲಕಿಯಾದ ತೇಜಾವತಿ ಉಪಸ್ಥಿತರಿದ್ದರು.
ಹಿರಿಯ ಶಿಕ್ಷಕ ಬೆಳ್ಳಪ್ಪ ಕೆ ವಂಡಿಸಿದರು.










