ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರವರ 13 ನೇ ಪುಣ್ಯ ಸ್ಮರಣೆಯ ಅಂಗವಾಗಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಪುಣ್ಯಸ್ಮರಣೆ

0

ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರವರ 13 ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮ ಆ. 22 ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ. ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರವರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ., ಉಪ-ಪ್ರಾಂಶುಪಾಲರಾದ ಡಾ. ಶ್ರೀಧರ ಕೆ., ಎಲ್ಲಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರುಗಳು ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.