ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣಗೌಡರ ಸಹಧರ್ಮಿಣಿ ದಿವಂಗತ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 13ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ನುಡಿ ನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆ.22ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ.) ಸುಳ್ಯ ಇದರ ಕೌಂನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ
ಪ್ರಾಸ್ತಾವಿಕವಾಗಿ ಮಾತನ್ನಾಡಿದರು.
















ಪ್ರೊ. ದಾಮೋದರ ಗೌಡರವರು ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ ತತ್ವ ಆದರ್ಶಗಳನ್ನು ತಿಳಿಸಿ ನುಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ.) ಸುಳ್ಯ ಇದರ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಚಂದ್ರಶೇಖರ್ ಪೇರಾಲ್, ಅಕಾಡೆಮಿಕ್ ಕೋ ಆರ್ಡಿನೇಟರ್ ಡಾ. ಕವಿತಾ ಬಿ. ಎಂ., ಕೆವಿಜಿ ಆಯುರ್ವೇದ ಫಾರ್ಮ ಮತ್ತು ರಿಸರ್ಚ್ ಸೆಂಟರ್ ನ ಸಿ.ಇ.ಒ. ಡಾ. ಪುರುಷೋತ್ತಮ ಕೆ. ಜಿ., ಮೆಡಿಕಲ್ ಆಫೀಸರ್ ಡಾ. ಸನತ್ ಕುಮಾರ್ ಡಿ. ಜೆ.,
ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ವಿನಯ್ ಶಂಕರ್ ಭಾರಧ್ವಾಜ್, ಕಚೇರಿ ಅಧೀಕ್ಷಕರಾದ ಚಂದ್ರಕುಮಾರ್ ಕೆ., ಸಂಸ್ಥೆಯ ಬೋಧಕ – ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ದಿ. ಕುರುಂಜಿ ಜಾನಕಿ ವೆಂಕಟರಮಣ ಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಡಾ. ವಿನಯ್ ಶಂಕರ್ ಭಾರಧ್ವಾಜ್ ಎಲ್ಲರನ್ನೂ ವಂದಿಸಿದರು










