ತೊಡಿಕಾನ : ಸೋಣ ಶನಿವಾರ ಬಲಿವಾಡು ಕೂಟ

0

ಶ್ರಾವಣ ಶನಿವಾರ ಪ್ರಯುಕ್ತ ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಆ. 23 ರಂದು ಬಲಿವಾಡು ಕೂಟ, ವಿಶೇಷ ಪೂಜೆ, ಭಜನಾ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆಯಿಂದ ಮಧ್ಯಾಹ್ನ ಮಹಾಪೂಜೆ ತನಕ ಭಜನಾ ಸಂಘಗಳಿಂದ ಭಜನೆ ನಡೆಯಿತು. ಮಹಾಪೂಜೆಯಲ್ಲಿ ನೂರಾರು ಭಕ್ತರು ಭಾಗಿಯಾದರು. ಬಳಿಕ ಅನ್ನಪ್ರಸಾದ ನಡೆಯಿತು.


ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು ಮಾಜಿ ಅಧ್ಯಕ್ಷರು, ಸದಸ್ಯರು, ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳು, ಭಜನಾ ಸಮಿತಿ ಪದಾಧಿಕಾರಿಗಳು, ಸಿಬ್ಬಂದಿ ವರ್ಗದವರು, ನೂರಾರು ಭಕ್ತರು ಭಾಗವಹಿಸಿದ್ದರು.