ದ ಕ ಸಂಪಾಜೆ :ರತ್ನ ಶ್ರೀ ಸ್ವಸಹಾಯ ಸಂಘದ ವಾರ್ಷಿಕೋತ್ಸವ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ದ ಕ ಸಂಪಾಜೆ ಒಕ್ಕೂಟದ ರತ್ನಶ್ರೀ ಸ್ವಸಹಾಯ ಸಂಘದ 20 ನೇ ವಾರ್ಷಿಕೋತ್ಸವವು ಶ್ರೀಮತಿ ಕಾತ್ಯಾಯಿನಿ ಕರುಣಾಕರ ಇವರ ಮನೆಯಲ್ಲಿ ಆ.17ರಂದು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಈಶ್ವರ ಆಚಾರ್ಯರವರು ವಹಿಸಿದ್ದರು. ಧ್ಯೇಯ ಗೀತೆಯೊಂದಿಗೆ ಕಾರ್ಯಕ್ರಮವು ಆರಂಭವಾಯಿತು.

ಯೋಜನಾಧಿಕಾರಿಯವರಾದ ಮಾಧವ ಗೌಡ ದೀಪ ಬೆಳಗಿಸಿ ಉದ್ಘಾಟಿಸಿದರು.

ನಂತರ ಶ್ರೀಮತಿ ಯಶೋದ ಇವರು 20 ವರುಷದ ವರದಿ ವಾಚನ ಮಾಡಿದರು. ನಂತರ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ನಂತರ ವಾರ್ಷಿಕೋತ್ಸವದ ಪ್ರಯುಕ್ತ ನಡೆಸಿದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿ, ಒಕ್ಕೂಟದ ಪದಾಧಿಕಾರಿಗಳು ಹಾಗೆ ಮನೆಯ ಯಜಮಾನ ಕರುಣಾಕರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀಮತಿ ಸಾವಿತ್ರಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಕೇಶವತಿ ಸ್ವಾಗತಿಸಿದರು ಲಕ್ಷ್ಮಿ ವಂದಿಸಿದರು.