ನಾಳೆ ವಳಲಂಬೆ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

0


ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆ ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಸೀಮಿತ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರುಗಳಿಗೆ ಇಲಾಖಾ ಮಾಹಿತಿ ಕಾರ್ಯಾಗಾರ ನಾಳೆ ಬೆಳಿಗ್ಗೆ ೧೦ ಗಂಟೆಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿರುವುದು.


ಸಭೆಯಲ್ಲಿ ನೂತನವಾಗಿ ರಚಿಸಲ್ಪಟ್ಟ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಿಗೆ ಇಲಾಖಾ ನಿಯಮಾವಳಿಗಳ ಬಗ್ಗೆ ಹಾಗೂ ಧಾರ್ಮಿಕ ವಿಚಾರ ಸೇರಿದಂತೆ ದೇವಸ್ಥಾನದ ಸಮಗ್ರ ಅಭಿವೃದ್ಧಿ ವಿಷಯಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.


ಇದರಲ್ಲಿ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನಾಲ್ಕೂರು, ಕಾವೂರು ಶ್ರೀ ಮಹಾವಿಷ್ಣು ದೇವಸ್ಥಾನ ಮರ್ಕಂಜ, ಶ್ರೀ ರಾಜನ್ ದೈವ ಪುರುಷ ಭೂತದೈವಸ್ಥಾನ ಕಂದ್ರಪ್ಪಾಡಿ, ಕೊಚ್ಚಿಲ ಸುಬ್ರಹ್ಮಣ್ಯ ದಏವಸ್ಥಾನ ಕೊಲ್ಲಮೊಗ್ರ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಇಲ್ಲಿಯ ಆಡಳಿತ ಮಂಡಳಿಯ ಪದಾಧಿಕಾರಿಗಳು ಭಾಗವಹಿಸುವಂತೆ ಆಯುಕ್ತರು ತಿಳಿಸಿದ್ದಾರೆ.