ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ : ರೋಟರಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಬಾಲಕಿಯರ ತಂಡ ಪ್ರಥಮ, ಬಾಲಕರ ತಂಡ ದ್ವಿತೀಯ

0

ಮುಂಗಾರು ವಾಲಿಬಾಲ್ ಅಕಾಡಮಿ (ರಿ)ಸುಳ್ಯ, ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಗಳು ಸುಳ್ಯ, ಮತ್ತು ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ಸ್ ಇವರ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಾಥಮಿಕ ವಿಭಾಗದಲ್ಲಿ ಸುಳ್ಯ ರೋಟರಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿದೆ. ಇವರಿಗೆ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ರಂಗನಾಥ್ ತರಬೇತಿ ನೀಡಿದ್ದರು.