ಅರಂತೋಡು: ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

0

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಸಿಬಿರವು ಅರಂತೋಡು ಸಿರಿಸೌಧ ಸಭಾಂಗಣದಲ್ಲಿ ಆಗಸ್ಟ್ 24 ರಿಂದ ಆರಂಭಗೊಂಡಿದ್ದು ಸೆಪ್ಟೆಂಬರ್ 7ರವರೆಗೆ ನಡೆಯಲಿರುವುದು.
ಅನಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ದಯಾನಂದ ಕುರುಂಜಿ, ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ಅರಂತೋಡು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಭವಾನಿ ಚಿಟ್ಟನ್ನೂರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಕಳೆದ ಮೂರು ದಿನಗಳಿಂದ ಸುಮಾರು 400 ಮಂದಿ ಇದರ ಪ್ರಯೋಜನ ಪಡೆದುಕೊಂಡರು.