














ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಾದೆ-ಬಳ್ಪ ಇದರ ಆಶ್ರಯದಲ್ಲಿ 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆ. 27ರಂದು ನಡೆಯಿತು.
ಬೆಳಿಗ್ಗೆ ಗಣಪತಿ ಪ್ರತಿಷ್ಠೆ, ಬಳಿಕ ಭಜನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಅಪರಾಹ್ನ ಭಜನಾ ಸಂಕೀರ್ತನೆಯೊಂದಿಗೆ ಶೋಭಾಯಾತ್ರೆ ನಡೆದು ಗಣಪತಿ ವಿಸರ್ಜನೆ ನಡೆಯಲಿದೆ.
ಗಣೇಶೋತ್ಸವ ಸಮಿತಿ ಅಧ್ಯಕ್ಷ ಮೋಹನ್ ಗೌಡ ಅಕ್ಕೇಣಿ, ಕಾರ್ಯದರ್ಶಿ ರವಿಕುಮಾರ್ ನರಿಯಂಗ, ಕೋಶಾಧಿಕಾರಿ ರಕ್ಷಿತ್ ನರಿಯಂಗ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಊರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.










