ಸುಳ್ಯ ಶ್ರೀ ರಾಮ ಮಂದಿರದಲ್ಲಿ ಗಣೇಶ ಚತುರ್ಥಿ ಆಚರಣೆ

0

ಸುಳ್ಯದ ಶ್ರೀರಾಮ ಪೇಟೆಯ ಶ್ರೀರಾಮ ಮಂದಿರದಲ್ಲಿ ಗಣೇಶ ಚತುರ್ಥಿ ಆಚರಣೆಯು ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಆ. 27ರಂದು ನೆರವೇರಿತು.
ಬೆಳಗ್ಗೆ ಅರ್ಚಕರ ನೇತೃತ್ವದಲ್ಲಿ ಗಣಪತಿ ಹವನವಾಗಿ ಬಳಿಕ ಚೆನ್ನಕೇಶವ ಮಹಿಳಾ ಪರಿಷತ್ ಮತ್ತು ದೀಪಾಂಜಲಿ ಮಹಿಳಾ ಭಜನಾ ಮಂಡಳಿ ಶಾಂತಿನಗರ ಇವರಿಂದ ಭಜನಾ ಕಾರ್ಯಕ್ರಮವು ನಡೆಯಿತು. ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನಸಂತರ್ಪಣೆಯಾಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಭಿಮನ್ಯು ಕಾಳಗ- ಗದಾಯುದ್ಧ ಎಂಬ ಯಕ್ಷಗಾನ ಪ್ರಸಂಗ ಪ್ರದರ್ಶನವಾಯಿತು . ಮಂದಿರದ ಧರ್ಮದರ್ಶಿ ಮಂಡಳಿಯ ಅಧ್ಯಕ್ಷ
ಕೆ. ಉಪೇಂದ್ರ ಪ್ರಭು ಹಾಗೂ ಧರ್ಮದರ್ಶಿ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಶ್ರೀ ರಾಮ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಅನಿಲ್ ಕುಮಾರ್ ಕೇರ್ಪಳ ಮತ್ತು ಸದಸ್ಯರು ಸಹಕರಿಸಿದರು. ಸ್ಥಳೀಯ ಭಕ್ತಾದಿಗಳು ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.