ಇಂದು ಕಾರ್ಯಕ್ರಮಗಳು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ನಡೆಯಲಿದೆ
ಸಾರ್ವಜನಿಕ ಆರಾಧನಾ ಸಮಿತಿ ಪಂಜ,ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ-2025 ಇದರ ವತಿಯಿಂದ ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆ.27 ರಿಂದ ಆ.29 ತನಕ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವಠಾರದಲ್ಲಿ ವಿಜೃಂಭಣೆಯಿಂದ ಜರುಗಲಿದೆ.
ರಾತ್ರಿ ಗಂಟೆ 10ರ ಒಳಗೆ ಕಾರ್ಯಕ್ರಮಗಳನ್ನು ಮುಗಿಸುವಂತೆ ಪೋಲಿಸ್ ಇಲಾಖೆ ನೀಡಿದ ಸೂಚನೆ ಮೇರೆಗೆ ಆ.28 ರಂದು ನಡೆಯುವ ಕಾರ್ಯಕ್ರಮಗಳು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಣಗೊಂಡ ಸಮಯಕ್ಕಿಂತ ಮುಂಚಿತವಾಗಿ ಆರಂಭಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.















.
ರಾತ್ರಿ ಗಂ 6.15 ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಗಣೇಶೋತ್ಸವ ಸಮಿತಿ ಅಧ್ಯಕ್ಷ ಗುರುಪ್ರಸಾದ್ ತೋಟ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಬೆಂಗಳೂರು, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ ವಿ ಪಾಲ್ಗೊಳ್ಳಲಿದ್ದಾರೆ. ಸಂಸ್ಕೃತಿ ಚಿಂತಕ ಉದಯಭಾಸ್ಕರ್ ಉಪನ್ಯಾಸ ನೀಡಲಿದ್ದಾರೆ. ಸಾರ್ವಜನಿಕ ಆರಾಧನಾ ಸಮಿತಿಯ ಅಧ್ಯಕ್ಷ ಸವಿತಾರ ಮುಡೂರು ಉಪಸ್ಥಿತರಿರುವರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂ.ಗಂ.5ರಿಂದ 6ತನಕ ಕು.ಸುಮಾ ಕೋಟೆ ರವರಿಂದ ಗಾನ ಸುಧೆ, ರಾತ್ರಿ .ಗಂ 7.30ರಿಂದ ಗುರುದೇವ್ ಅಕಾಡಮಿ ಆಫ್ ಫೈನ್ ಆರ್ಟ್ಸ್ ಮಂಡ್ಯ ಮತ್ತು ಮೈಸೂರು ಕಲಾವಿದರಿಂದ ನೃತ್ಯ ವೈವಿಧ್ಯ ಪ್ರದರ್ಶನಗೊಳ್ಳಲಿದೆ.
ಉತ್ಸವ ಕಾರ್ಯಕ್ರಮದಲ್ಲಿ ಬೆಳಗ್ಗಿನ ಪೂಜೆ, ಪ್ರಸಾದ ವಿತರಣೆ, ಭಜನಾ ಸಂಕೀರ್ತನೆ, ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ. ಅಪರಾಹ್ನ ಭಜನಾ ಸಂಕೀರ್ತನೆ, ಸಂಜೆ ಕುಣಿತ ಭಜನೆ, ರಾತ್ರಿ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ.
ಆ.29 : ಶೋಭಾಯಾತ್ರೆ:
ಆ.29 ರಂದು ಬೆಳಗಿನ ಪೂಜೆ, ಭಜನಾ ಸಂಕೀರ್ತನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಜರುಗಲಿದೆ.
ಸಂ.ಗಂ. 3ರಿಂದ ವೈಭವದ ಶೋಭಾಯಾತ್ರೆಯು ದೇಗುಲದ ವಠಾರದಿಂದ ಪಂಜ ಪೇಟೆಯ ಮೂಲಕ ಮುಖ್ಯರಸ್ತೆಯಲ್ಲಿ ಸಾಗಿ ಪಂಜ ಹೊಳೆಯ ಸೇತುವೆ ಬಳಿ ಜಲಸ್ತಂಭನ ಜರುಗಲಿದೆ. ಶೋಭಾಯಾತ್ರೆಯಲ್ಲಿ
ತುಳುನಾಡಿನ ಹೆಮ್ಮೆಯ ಹುಲಿ ವೇಷ, ಕೀಲು ಕುದುರೆ ,ಕುಣಿತ ಭಜನೆ, ನಾಸಿಕ್ ಬ್ಯಾಂಡ್ ಮೊದಲಾದ ತಂಡಗಳು ಪಾಲ್ಗೊಳ್ಳಲಿವೆ.










