ಸೆ.5; ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಯುಕ್ತ ಪೂರ್ವಭಾವಿ ಸಭೆ

0

ಕೇರ್ಪಡ ಶ್ರೀಮಹಿಷ ಮರ್ದಿನಿ ದೇವಸ್ಥಾನದಲ್ಲಿ ಪೂರ್ವ ಸಂಪ್ರದಾಯದಂತೆ ನವರಾತ್ರಿ ಉತ್ಸವ ವಿಜೃಂಭಣೆ ಯಿಂದ ನಡೆಯಲಿದ್ದು,ಆ ಪ್ರಯುಕ್ತ ಸೆಪ್ಟೆಂಬರ್
5 ನೇ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನವರಾತ್ರಿ ಉತ್ಸವದ ಬಗ್ಗೆ ಪೂರ್ವಭಾವಿ ಸಭೆ ನಡೆಯಲಿರುವುದು ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ. ವ್ಯವಸ್ಥಾಪನ ಸಮಿತಿ,ಮಹಿಳಾ ಸೇವಾ ಸಮಿತಿ, ಉತ್ಸವ ಸಮಿತಿ ಭಜನಾ ಮಂಡಳಿ, ಜೀರ್ಣೋದ್ದಾರ ಸಮಿತಿ, ಕೂಡುಕಟ್ಟು ಸದಸ್ಯರು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆ ಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿ ಕಾರ್ಯಕ್ರಮಗಳನ್ನು ಯಶಸ್ವಿ ಗೊಳಿಸಬೇಕಾಗಿ ವಿನಂತಿಸಲಾಗಿದೆ.

ಪ್ರಮುಖವಾಗಿ ನಿರಂತರ ಅನ್ನದಾನ ಮಾಡುವ ಭಕ್ತಾದಿಗಳು ಸಭೆಯಲ್ಲಿ ಭಾಗವಹಿಸಿ ಹೆಚ್ಚಿನ ಮಾಹಿತಿ ನೀಡಿ ಅಗತ್ಯ ಸಲಹೆ ಸೂಚನೆ ಗಳನ್ನು ನೀಡಬೇಕು ಎಂದು ವಿನಂತಿಸಿದ್ದಾರೆ.