ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರಾಜ್ಯ ಪ್ರಶಸ್ತಿ – ಮಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ

0

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2023-24ನೇ ಸಾಲಿನ ಅತ್ಯುತ್ತಮ ಕಾರ್ಯನಿರ್ವಾಹಣೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ, ಬೆಂಗಳೂರು ಇವರು ಉತ್ತಮ ಸಹಕಾರ ಸಂಘ
ಪ್ರಶಸ್ತಿ ನೀಡಿದ್ದಾರೆ.
ಆ.30. ಮಂಗಳೂರಿನಲ್ಲಿ ನಡೆದ ದ.ಕ.ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ನಗದು ಸಹಿತ ಪ್ರಶಸ್ತಿ ಪ್ರದಾನ ನಡೆಯಿತು.
ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ಯವರನ್ನು ದ.ಕ . ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಯಂ ಯನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಸಂಘದ ಉಪಾಧ್ಯಕ್ಷ ಸದಾನಂದ ಕಾರ್ಜ, ನಿರ್ದೇಶಕರಾದ ಸುಬ್ರಹ್ಮಣ್ಯ ಕುಳ, ವಾಸುದೇವ ಕೆರೆಕ್ಕೋಡಿ, ಮುದರ ಐವತ್ತೊಕ್ಲು, ಮಾಜಿ ಅಧ್ಯಕ್ಷ ಗಣೇಶ್ ಪೈ ಉಪಸ್ಥಿತರಿದ್ದರು.