ದ.ಕ.ಜಿಲ್ಲಾ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25 ನೇ ಸಾಲಿನ ಸಂಘದ ಗಣನೀಯ ಸೇವೆಯನ್ನು ಗುರುತಿಸಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.















ಮಂಗಳೂರಿನಲ್ಲಿ ನಡೆದ ಎಸ್.
ಸಿ.ಡಿ.ಸಿ.ಸಿ.ಬ್ಯಾಂಕಿನ ಮಹಾಸಭೆಯಲ್ಲಿ ಎಸ್ .ಸಿ.ಡಿ.ಸಿ.ಸಿ.ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ. ಎನ್ ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷ ಉದಯ ಕುಮಾರ್ ಬೆಟ್ಟ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಜೆ ರವರನ್ನು ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ರವಿಕಿರಣ ಎಡಪತ್ಯ, ಮಹೇಶ್ ಆಕ್ರಿಕಟ್ಟೆ, ಶಾಖಾಧಿಕಾರಿ ಪುನೀತ್ ಕುಮಾರ್ ಮೂಲೆಮನೆ ಉಪಸ್ಥಿತರಿದ್ದರು.










