














ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 9/11 ವಿನ್ಯಾಸ ನಕ್ಷೆ ಅನುಮೋದನೆ ಮಾಡಲು ಗ್ರಾಮಾಭಿವೃದ್ದಿ ಇಲಾಖೆಯ ಸಹಮತ ಇದ್ದರು ನಗರಾಭಿವೃದ್ಧಿ ಇಲಾಖೆ ಅನುಮತಿ ನೀಡದೆ ಇರುವುದರಿಂದ ಜನತೆಗೆ ಆಗುವ ತೊಂದರೆಯನ್ನು ಬಗೆಹರಿಸಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಪೆರುವಾಜೆ ಗ್ರಾಮ ಪಂಚಾಯಿತಿ ಸದಸ್ಯ ಸಚಿನ್ ರಾಜ್ ಶೆಟ್ಟಿ ಮನವಿ ಮಾಡಿದ್ದು ನಗರಾಭಿವೃದ್ಧಿ ಇಲಾಖೆ ಗ್ರಾಮ ಪಂಚಾಯಿತಿಗಳಲ್ಲಿ ವಿನ್ಯಾಸ ನಕ್ಷೆ ಅನುಮೋದನೆ ನೀಡಲು ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ. ವಿನ್ಯಾಸ ನಕ್ಷೆ ಅನುಮೋದನೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆದಾಗ ಮಾತ್ರ ಜನತೆಯ ಅಲೆದಾಟ ಮತ್ತು ನೆಮ್ಮದಿ ದೊರಕಲಿದೆ ಎಂದು ಸಚಿನ್ ತಿಳಿಸಿದ್ದಾರೆ










