ಜಿಎಲ್ ಆಚಾರ್ಯ ಜ್ಯುವೆಲ್ಲರ್‍ಸ್ ವತಿಯಿಂದ ಶಿಕ್ಷಕರಿಗಾಗಿ ವಿಶೇಷ ಕೊಡುಗೆ

0

ಸುಳ್ಯದ ಮುಖ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್‍ಸ್ ಗ್ರಾಹಕ ಸ್ನೇಹಿ ಸೇವೆಯನ್ನು ನೀಡುತ್ತಾ ಬರುತ್ತಿದೆ. ಹಬ್ಬ ಹರಿದಿನಗಳಲ್ಲಿ ಗ್ರಾಹಕರಿಗೆ ಅನೇಕ ಆಫರ್‌ಗಳನ್ನು ನೀಡುತ್ತಿದ್ದು, ಇದೀಗ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ವಿಶೇಷ ಕೊಡುಗೆಯನ್ನು ಘೋಷಿಸಿದೆ.

ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂಗೆ ೩೦೦ ರೂ. ಫ್ಲಾಟ್ ಡಿಸ್ಕೌಂಟ್, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ಗೆ ೫೦೦೦ ರೂ. ಫ್ಲಾಟ್ ಡಿಸ್ಕೌಂಟ್, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆಜಿಗೆ ೩೦೦೦ ರೂ. ಫ್ಲಾಟ್ ಡಿಸ್ಕೌಂಟ್ ಆಫರ್ ನೀಡಲಾಗುತ್ತಿದೆ. ಸೆ.೫ ರಿಂದ ಸೆ.೧೫ರ ವರೆಗೆ ಈ ವಿಶೇಷ ಆಫರ್ ಮೂಲಕ ಶಿಕ್ಷಕರು ಚಿನ್ನಾಭರಣಗಳನ್ನು ಖರೀದಿಸಬಹುದಾಗಿದೆ. ಖರೀದಿಗೆ ಬರುವ ಶಿಕ್ಷಕರು ತಮ್ಮ ಶಾಲೆ ಅಥವಾ ಕಾಲೇಜಿನ ಐಡಿಯನ್ನು ತೋರಿಸುವುದು ಕಡ್ಡಾಯವಾಗಿದೆ.
ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಆಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಪುತ್ತೂರಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್‍ಸ್ ಸುಳ್ಯ, ಮೂಡಬಿದ್ರಿ, ಹಾಸನ ಮತ್ತು ಕುಶಾಲನಗರದ ಜಿಎಲ್ ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ಈ ಕೊಡುಗೆ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.