ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ ತಾಲೂಕು, ಸುಳ್ಯ ವಲಯ ಗಾಂಧಿನಗರ ಕಾರ್ಯಕ್ಷೇತ್ರದ ಗಾಂಧಿನಗರ ಕೆಪಿಎಸ್ ನ ಪಿಯು ವಿಭಾಗದ ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.















ಸಂಪನ್ಮೂಲ ವ್ಯಕ್ತಿ ಡಾ.ಅನುರಾಧ ಕುರಂಜಿಯವರು ದುಶ್ಚಟಕ್ಕೆ ಬಲಿಯಾಗಿ ಅನುಭವಿಸುವ ಕಷ್ಟ ನಷ್ಟಗಳು ಮತ್ತು ಕೌಟುಂಬಿಕ ಹಾಗು ಸಾಮಾಜಿಕವಾಗಿ ಇದರಿಂದ ಆಗುವ ಸಮಸ್ಯೆಗಳನ್ನು ಕುರಿತು ಮಾಹಿತಿ ನೀಡಿದರು.
ವಲಯ ಒಕ್ಕೂಟದ ಅಧ್ಯಕ್ಷ
ಮನೋಹರ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ
ಪ್ರಾಂಶುಪಾಲರಾದ ಪರಮೇಶ್ವರಿ ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕ ದಿನೇಶ್ ರವರು ಪ್ರಾಸ್ತವಿಕವಾಗಿ ಮಾತನಾಡಿ
ವಿದ್ಯಾರ್ಥಿಗಳಿಗೆ ಪಿಯುಸಿ ನಂತರದ ವೃತ್ತಿಪರ ವಿದ್ಯಾಭ್ಯಾಸಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನ ನಿಧಿ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು.
ಕು. ಅನ್ವಿತಾ ಮತ್ತುಕು. ವಿನುತಾ ರವರು ಪ್ರಾರ್ಥಿಸಿದರು. ಶಾಲಾ ಉಪನ್ಯಾಸಕಿ ಪ್ರೇಮ ರವರು ಸ್ವಾಗತಿಸಿದರು, ಗಾಂಧಿನಗರ ಸೇವಾ ಪ್ರತಿನಿಧಿ ಸೌಜನ್ಯ ಕಾರ್ಯಕ್ರಮ ನಿರೂಪಿಸಿದರು.










