ಸೆ.7 ರಂದು ಸುಬ್ರಹ್ಮಣ್ಯದಲ್ಲಿ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನೇತೃತ್ವದಲ್ಲಿ

0

ಸುದ್ದಿ ಸುಳ್ಯ ಹಬ್ಬ ಸಮಿತಿ ಸೇರಿದಂತೆ ಪರಿಸರದ ಹಲವು ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್‌ ವೈದ್ಯಕೀಯ ಶಿಬಿರ

ಪತ್ರಕರ್ತರಾದ ಹರೀಶ್ ಬಂಟ್ವಾಳ್ ಮತ್ತು ಪಿ.ಬಿ.ಹರೀಶ್ ರೈ ಅವರಿಗೆ ಸನ್ಮಾನ

ಸುಬ್ರಹ್ಮಣ್ಯದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಕೆ.ವಿ.ಜಿ. ವೈದ್ಯಕೀಯ ಆಸ್ಪತ್ರೆ ಮತ್ತು ಮಹಾವಿದ್ಯಾಲಯ ಸುಳ್ಯ ಇವರ ಸಹಕಾರದಲ್ಲಿ , ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಉಚಿತ ಬೃಹತ್‌ ವೈದ್ಯಕೀಯ ಶಿಬಿರ ಸೆ.7 ರಂದು ಸುಬ್ರಹ್ಮಣ್ಯದಲ್ಲಿ ನಡೆಯಲಿದೆ.

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿ ಇರುವ ನೂತನ ಧರ್ಮಸಮ್ಮೇಳನ ಮಂಟಪದಲ್ಲಿ ಕಾರ್ಯಕ್ರಮ ಜರುಗಲಿದ್ದು
ಸಂಪುಟ ನರಸಿಂಹ ಸ್ವಾಮಿ ಮಠದ
ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾl ರವಿ ಕಕ್ಕೆಪದವು ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ.ಚಿದಾನಂದ,
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಜಾತ ಕಲ್ಲಾಜೆ, ಇರಲಿದ್ದಾರೆ.‌
ಕಾರ್ಯಕ್ರಮದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು
ಸುದ್ದಿ ಬಿಡುಗಡೆ ವಾರಪತ್ರಿಕೆಯ ಸಂಪಾದಕರಾದ ಅಧ್ಯಕ್ಷ ಹರೀಶ್ ಬಂಟ್ವಾಳ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈಯವರನ್ನು ಸನ್ಮಾನಿಸಲಿದ್ದಾರೆ.

ಉಚಿತ ವೈದ್ಯಕೀಯ ಶಿಬಿರದಲ್ಲಿ ಜನರಲ್ ಮೆಡಿಸಿನ್ ವಿಭಾಗ, ಶೀತ, ಜ್ವರ, ಕೆಮ್ಮು, ರಕ್ತದೊತ್ತಡ , ಸಕ್ಕರೆ ಕಾಯಿಲೆ, ರಕ್ತಹೀನತೆ, ಉಸಿರಾಟದ ತೊಂದರೆ ಇತ್ಯಾದಿ ಹಾಗೂ ಹರ್ನಿಯಾ, ಅಪೆಂಡಿಕ್ಸ್‌, ಪಿತ್ತಕೋಶದ ತೊಂದರೆ, ಕಿಡ್ನಿಸ್ಟೋನ್, ಮೂಲವ್ಯಾಧಿ, ಮಕ್ಕಳ ಅಪೌಷ್ಟಿಕತೆ, ಶೀತ, ಜ್ವರ, ಕೆಮ್ಮು ಇತ್ಯಾದಿ ಕಿವಿ, ಮೂಗು, ಗಂಟಲು ವಿಭಾಗ : ಥೈರಾಯಿಡ್, ಕಿವಿ, ಸೋರುವಿಕೆ ಮುಂತಾದ ತೊಂದರೆಗಳು, ನೇತ್ರ ಚಿಕಿತ್ಸಾ ವಿಭಾಗ : ಕಣ್ಣಿನ ಪೊರೆ, ದೃಷ್ಟಿ ಸಂಬಂಧಿತ ಇತರ ಕಾಯಿಲೆಗಳು
ಚರ್ಮ ಮತ್ತು ಲೈಂಗಿಕ ರೋಗ ವಿಭಾಗ : ಕಜ್ಜಿ ತುರಿಕೆ, ಅಲರ್ಜಿ ಮತ್ತು ಲೈಂಗಿಕ ರೋಗಗಳು
ಸ್ತ್ರೀ ರೋಗ ವಿಭಾಗದ
ಗರ್ಭಕೋಶ ಸಂಬಂಧಪಟ್ಟ ಕಾಯಿಲೆ, ಗರ್ಭಿಣಿ ಚಿಕಿತ್ಸೆ ಮುಟ್ಟಿಗೆ ಸಂಬಂಧಪಟ್ಟ ತೊಂದರೆ, ಬಂಜೆತನ ಮುಂತಾದ ತೊಂದರೆಗಳು. ಎಲುಬು ಮತ್ತು ಕೀಲು ವಿಭಾಗ,ಎಲುಬು ಮತ್ತು ಕೀಲು ಸಂಬಂಧಿತ ಕಾಯಿಲೆಗಳು, ಶ್ವಾಸಕೋಶ ವಿಭಾಗ
ತುರ್ತು ಚಿಕಿತ್ಸಾ ವಿಭಾಗ, ಇಸಿ.ಜಿ. ತಪಾಸಣೆ ಲಭ್ಯವಿರಲಿದೆ.

ಕಾರ್ಯಕ್ರಮದ ಸಂಘಟನೆಯಲ್ಲಿ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಹಾಗೂ ನೌಕರ ವೃಂದ, ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠ, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಸುದ್ದಿ ಸುಳ್ಯ ಹಬ್ಬ ಸುಬ್ರಹ್ಮಣ್ಯ ಗ್ರಾಮ ಸಮಿತಿ, ಜೇಸಿಐ ಸುಬ್ರಹ್ಮಣ್ಯ ಕುಕ್ಕೆಶ್ರೀ, ಇನ್ನರ್‌ ವೀಲ್ ಕ್ಲಬ್ ಸುಬ್ರಹ್ಮಣ್ಯ, ಕುಕ್ಕೆಶ್ರೀ ಆಟೋ ಚಾಲಕ ಮಾಲಕರ ಸಂಘ ಲ, ಸುಬ್ರಹ್ಮಣ್ಯ ಬಿ.ಎಂ.ಎಸ್. ಆಟೋ ಚಾಲಕ ಮಾಲಕರ ಸಂಘ ಸುಬ್ರಹ್ಮಣ್ಯ, ಸುಬ್ರಹ್ಮಣ್ಯ ಟ್ಯಾಕ್ಸಿ ಮಾಲಕ ಚಾಲಕರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಪೋಲಿಸ್ ಠಾಣೆ, ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ, ಅನುಗ್ರಹ ಎಜುಕೇಶನ್ ಟ್ರಸ್ಟ್ ಸುಬ್ರಹ್ಮಣ್ಯ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಟ್ಯಾಕ್ಸಿ ಮತ್ತು ಗೂಡ್ಸ್ ಚಾಲಕ ಮಾಲಕರ ಸಂಘ ಸುಬ್ರಹ್ಮಣ್ಯ,
ಸ್ತ್ರೀ ಶಕ್ತಿ ಗುಂಪುಗಳು ಹಾಗೂ ವಾಣಿ ವನಿತಾ ಸಮಾಜ ಸುಬ್ರಹ್ಮಣ್ಯ, ನವೋದಯ ಸ್ವ-ಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ. ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘ ಸುಬ್ರಹ್ಮಣ್ಯ, ವರ್ತಕರ ಸಂಘ ಸುಬ್ರಹ್ಮಣ್ಯ, ಹೊಸಬೆಳಕು ಚಾರಿಟೇಬಲ್ ಟ್ರಸ್ಟ್ ಸುಬ್ರಹ್ಮಣ್ಯ. ಮತ್ತಿತರರ ಸಂಘಟನೆಗಳ ಸಹಯೋಗದಲ್ಲಿ ಕಾರ್ಯಕ್ರಮ ಜರಗಲಿದೆ.