ಲಂಚ ಮುಕ್ತವಾಗಿರುವ ಕ್ಷೇತ್ರ ಶಿಕ್ಷಣ : ಭಾಗೀರಥಿ ಮುರುಳ್ಯ
“ಸಮಾಜದಲ್ಲಿ ಲಂಚ ಮುಕ್ತವಾಗಿರುವ ಕ್ಷೇತ್ರವಿದ್ದರೆ ಅದು ಶಿಕ್ಷಣ ಕ್ಷೇತ್ರ” ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಅರಂತೋಡು ನೆಹರೂ ಸ್ಮಾರಕ ವಿದ್ಯಾಸಂಸ್ಥೆಯಲ್ಲಿ ಸೆ.5ರಂದು ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.















ಶಾಸಕರು ಬೇಗ ತೆರಳಿದ್ದು ಬಳಿಕ ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಅಧ್ಯಕ್ಷತೆ ವಹಿಸಿದ್ದರು.
ನಿವೃತ್ತ ಅಧ್ಯಾಪಕ ರಾಮಕೃಷ್ಣ ಭಟ್ ಚೊಕ್ಕಾಡಿ ದಿಕ್ಸೂಚಿ ಭಾಷಣ ಮಾಡಿದರು.

ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ ನೀರಬಿದಿರೆ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಗ್ರಾ.ಪಂ. ಉಪಾಧ್ಯಕ್ಷೆ ಭವಾನಿ, ಸದಸ್ಯೆ ಮಾಲಿನಿ, ತಹಶೀಲ್ದಾರ್ ಮಂಜುಳಾ, ತಾ.ಪಂ. ಇ.ಒ. ರಾಜಣ್ಣ, ಅರಂತೋಡು ವಿದ್ಯಾಸಂಸ್ಥೆಯ ಸಂಚಾಲಕ ಕೆ.ಆರ್.ಗಂಗಾಧರ್, ಅರಂತೋಡು ಎನ್.ಎಂ.ಪಿ.ಯು.ಸಿ. ಪ್ರಾಂಶುಪಾಲ ಸುರೇಶ್ ವಾಗ್ಲೆ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ನಿತೀನ್ ಪ್ರಭು, ಕ.ಸಾ.ಪ. ಅಧ್ಯಕ್ಷ ಚಂದ್ರಶೇಖರ ಪೇರಾಲು ಹಾಗೂ ಶಿಕ್ಷಕರುಗಳ ವಿವಿಧ ಸಂಘಗಳ ಪದಾಧಿಕಾರಿಗಳು ವೇದಿಕೆಯಲ್ಲಿ ಇದ್ದರು.
ಸನ್ಮಾನ ಕಾರ್ಯಕ್ರಮ ಗಳು ನೆರವೇರಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ. ಸ್ವಾಗತಿಸಿದರು. ಕಾರ್ಯಕ್ರಮ ನೋಡೆಲ್ ಗೋಪಿನಾಥ್ ವಂದಿಸಿದರು.
ಶಿಕ್ಷಕಿ ಚಂದ್ರಮತಿ, ಕಿಶೋರು ಕುಮಾರ್, ಧನಂಜಯ ಕಾರ್ಯಕ್ರಮ ನಿರೂಪಿಸಿದರು.
















