ಆರೋಗ್ಯ ಸಮೃದ್ದಿಯ ಔನತ್ಯಕ್ಕೆ ಕ್ರೀಡಾ ಚಟುವಟಿಕೆಗಳ ಪಾತ್ರ ಅನನ್ಯ :ಅಶೋಕ್ ನೆಕ್ರಾಜೆ
ಪಠ್ಯದೊಂದಿಗೆ ಪಠ್ಯೇತರ ಚಟಿವಟಿಕೆಗಳು ವಿದ್ಯಾರ್ಥಿಗಳ ಬದುಕಿಗೆ ಪೂರಕವಾಗುತ್ತದೆ. ಆರೋಗ್ಯ ಸಮೃದ್ದಿಯ ಔನತ್ಯಕ್ಕೆ ಕ್ರೀಡಾ ಚಟುವಟಿಕೆಗಳ ಪಾತ್ರ ಅನನ್ಯ. ಪಂದ್ಯಾಟಗಳು ಕ್ರೀಡಾಳುಗಳು ಕ್ರೀಡಾಸ್ಪೂರ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಇದರಿಂದ ಈ ಕ್ಷೇತ್ರದಲ್ಲಿ ಉನ್ನತ ಸ್ಥಾನ ಪ್ರಾಪ್ರವಾಗುತ್ತದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ ಹೇಳಿದರು.















ಅವರು ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ ಆಶ್ರಯದಲ್ಲಿ ಸೆ.9 ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಕಡಬ ತಾಲೂಕು ಮಟ್ಟದ ಬಾಲಕ- ಬಾಲಕಿ ಯರ ತ್ರೋಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಸ್ತು ಮತ್ತು ಕಠಿಣ ಪರಿಶ್ರಮ ಕ್ರೀಡಾಳುಗಳ ಆಸ್ತಿ. ಪರಿಶ್ರಮಯುಕ್ತ ಅಭ್ಯಾಸ ಕೂಡಾ ಕ್ರೀಡಾಳುಗಳಿಗೆ ಅಗತ್ಯ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷೆ ಸುಜಾತಾ ಕಲ್ಲಾಜೆ ವಹಿಸಿದ್ದರು. ಕಾಲೇಜಿನ ಪ್ರಾಚಾರ್ಯ ಸೋಮಶೇಖರ್ ನಾಯಕ್, ತಾಲೂಕು ಕ್ರೀಡಾ ಮಂಡಳಿ ಸಂಚಾಲಕ ಹ್ಯಾರಿಸ್, ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ತ್ರಿವೇಣಿ ದಾಮ್ಲೆ, ಉಪಾಧ್ಯಕ್ಷ ಗುಣವರ್ಧನ ಕೆದಿಲ, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಲೋಕೇಶ್ ಬಿ.ಎನ್, ಉಪನ್ಯಾಸಕಿ ಸವಿತಾ ಕೈಲಾಸ್, ಕ್ರೀಡಾ ಕಾರ್ಯದರ್ಶಿ ಧನುಶ್ ಕಾಶಿಕಟ್ಟೆ ವೇದಿಕೆಯಲ್ಲಿದ್ದರು.










