ಬೆಳ್ಳಾರೆ: ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ, ರಾಷ್ಟ್ರೀಯ ಪೋಷಣ್ ಮಾಸಾಚರಣೆ, ಆರೋಗ್ಯ ಮಾಹಿತಿ ಕಾರ್ಯಕ್ರಮ

0

ಪೌಷ್ಟಿಕ ಆಹಾರ ಮನುಷ್ಯನ ಆರೋಗ್ಯವನ್ನು ಕಾಪಾಡುತ್ತದೆ : ಜೇಸಿ ಮಹಮ್ಮದ್ ಆರೀಪ್

ಕರ್ನಾಟಕ ಸರ್ಕಾರ, ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗ್ರಾಮ ಪಂಚಾಯತ್ ಬೆಳ್ಳಾರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ, ಮತ್ತು ಸ್ನೇಹಿತರ ಕಲಾ ಸಂಘ (ರಿ) ಬೆಳ್ಳಾರೆ ಈ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ, ರಾಷ್ಟೀಯ ಪೌಷ್ಟಿಕ ಆಹಾರ ಸಪ್ತಾಹ, ಪೋಷಣ್ ಮಾಸಾಚರಣೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ ಸೆ.9 ರಂದು ಬೆಳ್ಳಾರೆ ರಾಜೀವ್ ಗಾಂಧೀ ಸೇವಾ ಕೇಂದ್ರದ ಸಭಾಭವನದಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಮಿತಾ ಎಲ್ ರೈ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಜೆಎಸಿ ಜೋನಲ್ ಚಯರ್ಮೆನ್ ಜೇಸಿ ಮಹಮ್ಮದ್ ಆರೀಫ್ ಬೆಳ್ಳಾರೆ ಇವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವೇದಾಮೃತ ಚಿಕಿತ್ಸಾಲಯ ಬೆಳ್ಳಾರೆಯ ವೈದ್ಯರಾದ ಡಾ. ಕಾವ್ಯ ಜೆ ಎಚ್ ಸಂಪನ್ಮೂಲ ವ್ಯಕ್ತಿಯಾಗಿ ಮಕ್ಕಳ ಬಾಲ್ಯದ ಆರೈಕೆ ಮತ್ತು ಪೌಷ್ಟಿಕ ಆಹಾರ ಸೇವನೆಯ ಬಗ್ಗೆ ಅರೋಗ್ಯ ಮಾಹಿತಿ ನೀಡಿದರು.
ಮುಖ್ಯ ಅತಿಥಿಯಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ವೀಣಾ ಮೂಡಾಯಿತೋಟ, ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀಮತಿ ಭಾರತಿ ಶಿವರಾಮ್, ಶ್ರೀ ರಕ್ತೇಶ್ವರಿ ಮಹಿಳಾ ಮಂಡಳಿ ಕೊಲಂಬಳ ಇದರ ಅಧ್ಯಕ್ಷರಾದ ಶ್ರೀಮತಿ ಸುಲೋಚನ ವಿಶ್ವನಾಥ ಕೆ. ಇವರು ಮುಖ್ಯ ಅತಿಥಿಯಾಗಿ ಶುಭಹಾರೈಸಿದರು.

ಸಮಗ್ರ ಶಿಶು ಯೋಜನೆ ಸುಳ್ಯ ಬೆಳ್ಳಾರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ಉಷಾ ಪ್ರಸಾದ್ ರೈ ಇವರು ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು.
ಬೆಳ್ಳಾರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ ವಿ, ಬೆಳ್ಳಾರೆ ಪ್ರಾಥಮಿಕ ಅರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ.ಕಿರಣ್ ಯು, ಬೆಳ್ಳಾರೆ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ ಪದ್ಮನಾಭ ಬೀಡು,, ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಅಧ್ಯಕ್ಷರಾದ ರೇಷ್ಮಾ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ೬೦ ಬಗೆಯ ವಿಭಿನ್ನ ಪೌಷ್ಟಿಕ ಆಹಾರ ಪ್ರದರ್ಶನ ನಡೆಯಿತು ಮತ್ತು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ನಡೆಸಿದ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು.

ಮುಕ್ಕೂರು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರೂಪಾ ಸ್ವಾಗತಿಸಿ, ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಪೂರ್ವಾಧ್ಯಕ್ಷ, ಸಂಜಯ್ ನೆಟ್ಟಾರು ವಂದಿಸಿದರು, ಇಂದಿರಾ ಕೆ ಅಜಪಿಲ ಮತ್ತು ಪೂರ್ಣಿಮಾ ಪೆರುವಾಜೆ ಪ್ರಾರ್ಥಿಸಿದರು, ಬೆಳ್ಳಾರೆ ಅಂಗನವಾಡಿ ಕಾರ್ಯಕರ್ತೆ ಭಾರತಿ ಕೆ ಕಾರ್ಯಕ್ರಮ ನಿರೂಪಿಸಿದರು.
ಬೆಳ್ಳಾರೆ ಮತ್ತು ಪೆರುವಾಜೆ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ , ಬೆಳ್ಳಾರೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮತ್ತು ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಮತ್ತು ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಸದಸ್ಯರು ಸಹಕರಿಸಿದರು.