ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್

0

ಗುತ್ತಿಗಾರು ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ

ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು, ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇವರ ಆಶ್ರಯದಲ್ಲಿ ಸೆ.10 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಗುತ್ತಿಗಾರಿನಲ್ಲಿ ನಡೆಯಿತು.

ಈ ಪಂದ್ಯಾಟದಲ್ಲಿ ಅತಿಥೇಯ ಗುತ್ತಿಗಾರು ಬಾಲಕಿಯರ ತಂಡವು ರೋಟರಿ ಪದವಿ ಪೂರ್ವ ಕಾಲೇಜು ತಂಡವನ್ನು ಮಣಿಸಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.