ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂದು ನಮೂದಿಸಲು ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ವಿನಂತಿ

0

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22 ರಿಂದ ಅಕ್ಟೋಬರ್ 7 ರ ವರೆಗೆ ನಡೆಯಲಿದೆ.
ಕರ್ನಾಟಕ ಸರಕಾರವು ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು ಸಂಖ್ಯೆಯಲ್ಲಿ ಇರುವ ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಜನಾಂಗಕ್ಕಾಗಿ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯನ್ನು ಹುಟ್ಟುಹಾಕಿದೆ. ಹಾಗಾಗಿ ಅರೆಭಾಷೆಯ ಅಸ್ಮಿತೆಗಾಗಿ ಅರೆಭಾಷೆ ಮಾತನಾಡುವ, ತಿಳಿದಿರುವ ಪ್ರತಿಯೊಬ್ಬರೂ ಸರ್ಕಾರ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ಗಣತಿಯ ಪ್ರಪತ್ರದ ಮಾತೃಭಾಷೆ ಕಾಲಂನಲ್ಲಿ 13ನೇ ಸಂಖ್ಯೆಯ ಭಾಷೆಯಾಗಿರುವ ಅರೆಭಾಷೆಯನ್ನು ಆಯ್ಕೆ ಮಾಡಿ ಬರೆಯಬೇಕೆಂದು ವಿನಂತಿಸುತ್ತಿದ್ದೇನೆ ” ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ.
” ಇದರಿಂದ ಅರೆಭಾಷೆ ಮಾತನಾಡುವವರ ಸಂಖ್ಯೆ ಹಾಗೂ ನಿಖರ ಮಾಹಿತಿ ಪಡೆಯಲು ಸಾಧ್ಯ.
ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಕೇಳಲಾಗುವುದು. ಎಲ್ಲರೂ ಪ್ರತಿಯೊಂದು ಪ್ರಶ್ನೆಗೂ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ” ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.