ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಅರಿವು ಕಾರ್ಯಕ್ರಮ

0

ಮಿಷನ್ ಶಕ್ತಿ ಯೋಜನೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ, ಮಂಗಳೂರು ಮತ್ತು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ‘ಮಹಿಳಾ ಸಬಲೀಕರಣ’ ಅರಿವು ಕಾರ್ಯಕ್ರಮವು ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ ಕೆ ರವರು ವಹಿಸಿದರು. ಸುಳ್ಯ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರಾದ ಶ್ರೀಮತಿ ಶೈಲಜಾ ಬಿ ರವರು ಮಾತನಾಡಿ ವಿದ್ಯಾರ್ಥಿಗಳು ಅಂಕಗಳ ಜೊತೆ ಕೌಶಲ್ಯವನ್ನು ಕೂಡ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ವಿಶೇಷವಾಗಿ ಮಹಿಳಾ ಸಬಲೀಕರಣದ ಅಂಗವಾಗಿ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ STEM (Science,Technology,Engineering,Mathematics) ಇದರ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಮಿಷನ್ ಶಕ್ತಿ ಯೋಜನೆಯ ಜಿಲ್ಲಾ ಕಾರ್ಯಕ್ರಮಗಳ ಸಂಯೋಜಕರಾದ ಶ್ರೀಮತಿ ಅಶ್ವಿನಿ ರವರು ಮಹಿಳಾ ಸಬಲೀಕರಣ ದ ಬಗ್ಗೆ ಮಾತನಾಡಿ ಜೊತೆಗೆ ಮಹಿಳೆಯರು ವಿಜ್ಞಾನವನ್ನು ಹೆಚ್ಚು ಅಧ್ಯಯನ ಮಾಡಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ವಿಜ್ಞಾನಿಗಳಾಗಬೇಕೆಂದು ಹೇಳಿದರು.

ರಾಜ್ಯಶಾಸ್ತ್ರ ಉಪನ್ಯಾಸಕರಾದ ದಾಮೋದರ ಎನ್ ಸ್ವಾಗತಿಸಿ ಇತಿಹಾಸ ಉಪನ್ಯಾಸಕರಾದ ಪ್ರಸನ್ನ ಎನ್ ಎಚ್ ರವರು ವಂದಿಸಿದರು. ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿಯರಾದ ಶ್ರೀಮತಿ ಉಷಾ ಎಂ ಪ್ರಸಾದ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಂದ STEM ಆಧಾರದಲ್ಲಿ ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿದರು. ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರು ಮತ್ತು ಪ್ರಾಂಶುಪಾಲರು ಸ್ಮರಣಿಕೆ ನೀಡಿ ಗೌರವಿಸಿದರು.