ಸೆ.22 ರಿಂದ ಅ.01 : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

0

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೆ.22 ರಿಂದ ಅ.01 ರ ವರೆಗೆ ನವರಾತ್ರಿ ಉತ್ಸವವು ವರ್ಷಂಪ್ರತಿಯಂತೆ ನಡೆಯಲಿದೆ.
ನವರಾತ್ರಿ ಸಮಯದಲ್ಲಿ ಪ್ರತೀದಿನ ಬೆಳಿಗ್ಗೆ ಗಂಟೆ 7.30 ರಿಂದ ಗಂಟೆ 9.00 ,10.30 ರಿಂದ ಮಧ್ಯಾಹ್ನ 12.30 ಹಾಗೂ ಸಂಜೆ 6.00. ರಿಂದ 7.30 ರವರೆಗೆ ವಾಹನ ಪೂಜೆ ನಡೆಯಲಿದೆ.
ರಾತ್ರಿ ಗಂಟೆ 7.30 ಕ್ಕೆ ದುರ್ಗಾಪೂಜಡ,ರಾತ್ರಿ ಗಂಟೆ 8.30ಕ್ಕೆ ಮಹಾಮಂಗಳಾರತಿ ,ಪ್ರಸಾದ ವಿತರಣೆ ನಡೆಯಲಿದೆ.
ಅ.01 ರಂದು ಆಯುಧ ಪೂಜೆ,ಅ.02 ರಂದು ವಿಜಯದಶಮಿ ದಿನದಂದು ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದುರ್ಗಾದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ಭಟ್ ಬಾಂಜಿಕೋಡಿ ತಿಳಿಸಿದ್ದಾರೆ.