ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ನಾಲ್ಕನೆಯ ತರಗತಿಯ ವಿದ್ಯಾರ್ಥಿ ಆಶ್ರಿತ್ ಎ.ಸಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರ ಕ್ರೀಡಾಕೂಟದ ತಾಳಬದ್ಧ ಯೋಗಾಸನ(ಜೋಡಿ ), ವೈಯಕ್ತಿಕ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಮತ್ತು ಸುಳ್ಯ ತಾಲೂಕು ದಸರಾ ಕ್ರೀಡಾಕೂಟದಲ್ಲಿ ಯೋಗ (ರಿದಮಿಕ್ ಪೇರ್) ಪ್ರಥಮ, ಟ್ರೆಡಿಶನಲ್ ಯೋಗದಲ್ಲಿ ದ್ವಿತೀಯ ಸ್ಥಾನವನ್ನು, ಕಲಾತ್ಮಕ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.















ಇವರನ್ನು ಶಾಲಾ ಸಂಚಾಲಕರಾದ ಡಾ. ರೇಣುಕಾ ಪ್ರಸಾದ್ ರವರು ಅಭಿನಂದಿಸಿ, ಶುಭ ಹಾರೈಸಿದರು.
ಶಾಲಾ ಪ್ರಾಂಶುಪಾಲರಾದ ಅರುಣ್ ಕುಮಾರ್ ಅವರು ಆಶ್ರಿತ್ ನ ಸಾಧನೆ ಇನ್ನಷ್ಟು ಉನ್ನತ ಮಟ್ಟಕ್ಕೆ ಏರಲಿ. ಈ ಸಾಧನೆ ಎಲ್ಲರಿಗೂ ಸ್ಪೂ ರ್ತಿಯಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










