“ಸ್ವಚ್ಚತಾ ಹೀ ಸೇವಾ-ಸ್ವಚ್ಚತೆಯೇ ಸೇವೆ ಪಾಕ್ಷಿಕ-2025” ಅಭಿಯಾನದ ತಾಲೂಕು ಮಟ್ಟದ ಕಾರ್ಯಕ್ರಮಕ್ಕೆ ಜಾಲ್ಸೂರು ಗ್ರಾಮ ಪಂಚಾಯತ್ ಸ್ವಚ್ಛ ಸಂಕೀರ್ಣ ವಠಾರದಲ್ಲಿ ಗಿಡಗಳನ್ನು ನೆಡುವ ಸೆ.15ರಂದು ಚಾಲನೆ ನೀಡಲಾಯಿತು.
















ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸಾವಿತ್ರಿ ಅಡ್ಕಾರುಬೈಲು, ಉಪಾಧ್ಯಕ್ಷರಾದ ತಿರುಮಲೇಶ್ವರಿ, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಕಾರ್ಯದರ್ಶಿಯವರು, ಸಾಮಾಜಿಕ ಅರಣ್ಯ ಇಲಾಖಾಧಿಕಾರಿಯವರು, ಸಿಬ್ಬಂದಿ ವರ್ಗದವರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸ್ವಚ್ಛತಾ ಕಾರ್ಮಿಕರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ವಚ್ಛತಾ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಬಳಿಕ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತೆಮಾಡಿ ಸ್ವಚ್ಚತಾ ಬಗ್ಗೆ ಜಾಗೃತಿ ಮೂಡಿಸಲಾಯಿತು.










