ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಅಂಗವಾಗಿ ಮಕ್ಕಳ ವಿಭಾಗ ಹಾಗೂ ಕಮ್ಯುನಿಟಿ ಮೆಡಿಸಿನ್ ವಿಭಾಗದ ಸಹಯೋಗದಲ್ಲಿ ವಿಶೇಷ ಮಾಹಿತಿ ಕಾರ್ಯಕ್ರಮ ಸೆ. 16ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಉದ್ಘಾಟಿಸಿ, ಶುಭ ಹಾರೈಸಿದರು. ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ. ಸುಧಾ ರುದ್ರಪ್ಪ ಮಾತಾನಾಡಿ ಪೌಷ್ಠಿಕಾಂಶದ ಕೊರತೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜಾಗೃತಿ ನೀಡಿದರು.















ಈ ಸಂದರ್ಭದಲ್ಲಿ ಕಮ್ಯುನಿಟಿ ಮೆಡಿಸಿನ್ ವಿಭಾಗದ ಡಾ .ಅನಿಲ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ನ ಪ್ರಾಂಶುಪಾಲ ಡಾ. ಪ್ರಮೋದ್ ಕೆ.ಜೆ, ಡಾ. ರಂಗನಾಥ್, ಡಾ. ಅಪೂರ್ವ ದೊರೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಡಾ. ಚೈತನ್ಯ ಪ್ರಾರ್ಥಿಸಿದರು. ಡಾ. ಹರ್ಷಿತಾ ನಾಗರಾಜ್ ಕಾರ್ಯಕ್ರಮ ನಿರೂಪಿಸಿ ಡಾ. ನಾಗರಾಜ್ ವಂದಿಸಿದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕೇತ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










