














ಬೆಳ್ಳಾರೆ ಕಾಮಧೇನು ಟವರ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಕಾಮಧೇನು ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ ಚಿಕ್ಕಬಳ್ಳಾಪುರ ಮತ್ತು ಕೋಲಾರ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ಅಮರ್ ಆರ್.ಮತ್ತು ಹಿರಿಯ ತಾಂತ್ರಿಕ ಕೃಷಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸೆ.18 ರಂದು ಭೇಟಿ ನೀಡಿದರು.
ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು.

ಸಂಘದ ಅಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು,ಕಾರ್ಯನಿರ್ವಹಣಾಧಿಕಾರಿ ವಿಜಯ್ ರವರು ಅವರನ್ನು ಶಾಲು ಹೊದಿಸಿ ,ಸ್ಮರಣಿಕೆ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸ್ವಸಹಾಯ ಸಂಘದ ಮೇಲ್ವಿಚಾರಕಿ ಶ್ರೀಮತಿ ಗೀತಾ ಪ್ರೇಮ್,ಸ್ವಸಹಾಯ ಸಂಘದ ಪ್ರೇರಕ ಚಿನ್ನಪ್ಪ ಗೌಡ ಮತ್ತು ನಿರ್ದೇಶಕರು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.










