ಜಾಲ್ಸೂರು : ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಮತ್ತು ಆರೋಗ್ಯ ಮಾಹಿತಿ ಕಾರ್ಯಗಾರ

0

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಮತ್ತು ಆರೋಗ್ಯ ಮಾಹಿತಿ ಕಾರ್ಯಗಾರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ. 18ರಂದು ನಡೆಯಿತು.

ವಿಜಯ ಗ್ರಾಮಾಭಿವೃದ್ಧಿ ಸಮಿತಿಯ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಆರೋಗ್ಯಕ್ಕೆ ಸಂಬಂಧಪಟ್ಟಂತೆ ಗ್ರಾಮದಲ್ಲಾಗುವ ಯಾವುದೇ ಕಾರ್ಯಕ್ರಮಗಳಿಗೆ ನಮ್ಮ ಸಮಿತಿಯ ಸಹಕಾರ ಸದಾ ಇದೆ” ಎಂದರು

ಜಾಲ್ಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಸಾವಿತ್ರಿ ಗೋಪಾಲ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಆರ್ಭಡ್ಕ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ನಿಶಾಂತ್ ಮೊಂಟಡ್ಕ ಉಪಸ್ಥಿತರಿದ್ದರು.

ಸುಳ್ಯದ ನೆಹರು ಮೆಮೊರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಅನುರಾಧ ಕುರುಂಜಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ “ಆಹಾರದಿಂದ ಆರೋಗ್ಯ” ಎಂಬ ವಿಷಯದ ಬಗ್ಗೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯತ್ ಪಿಡಿಓ ಶ್ರೀಮತಿ ಶೈಲಜಾ, ವರಲಕ್ಷ್ಮಿ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಅಧ್ಯಕ್ಷೆ ಶ್ರೀಮತಿ ಲತಾ ಕುಮಾರಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಜಲಜಾಕ್ಷಿ, ಶ್ರೀಮತಿ ಜಯಶ್ರೀ ಗೌರವ ಉಪಸ್ಥಿತಿ ಇದ್ದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಏಳು ಅಂಗನವಾಡಿ ಕೇಂದ್ರಗಳ ತಲಾ ಓರ್ವ ಮಹಿಳೆಯಂತೆ ಒಟ್ಟು 7 ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಮಾಡಲಾಯಿತು. ಓರ್ವ ಪುಟಾಣಿ ಮಗುವಿಗೆ ಅನ್ನಪ್ರಾಶಾನ ಕಾರ್ಯಕ್ರಮವು ನಡೆಯಿತು.

ಜಾಲ್ಸೂರು ಅಂಗನವಾಡಿ ಕೇಂದ್ರದ ಎಲ್ಲಾ ಕಾರ್ಯಕರ್ತರು ಮತ್ತು ವರಲಕ್ಷ್ಮಿ ಸ್ತ್ರೀ ಶಕ್ತಿ ಗೊಂಚಲು ಸಮಿತಿಯ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

ಬೆಳ್ಳಾರೆ ವಲಯದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಶ್ರೀಮತಿ ಉಷಾಪ್ರಸಾದ್ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕೋನಡ್ಕ ಅಂಗನವಾಡಿ ಕಾರ್ಯಕರ್ತೆ ನಿವೇದಿತಾ ಪದವು ಕಾರ್ಯಕ್ರಮ ನಿರೂಪಿಸಿದರು. ಶುಭ ಸೋಣoಗೇರಿ ಪ್ರಾರ್ಥಿಸಿ,
ಆಶಾ ಬೈತಡ್ಕ ಸ್ವಾಗತಿಸಿ, ಹರಿಣಾಕ್ಷಿ ಮರಸಂಕ ವಂದಿಸಿದರು.