ಅತ್ಯುತ್ತಮ ಯುವಕ ಯುವತಿ ಮಂಡಲಗಳಿಗೆ ಪ್ರಶಸ್ತಿ ಪ್ರದಾನ
ಸುಳ್ಯ ಯುವಜನ ಸಂಯುಕ್ತ ಮಂಡಳಿ ವಾರ್ಷಿಕ ಮಹಾಸಭೆಯು ಸೆ.20ರಂದು ಬೆಳಗ್ಗೆ 10 ಗಂಟೆಗೆ ನಡೆಯುವುದು.
ಸಮಾರಂಭದಲ್ಲಿ ಅತ್ಯುತ್ತಮ ಯುವಕ ಯುವತಿ ಮಂಡಲಗಳಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಸಮಾರಂಭ ನಡೆಯಲಿದೆ.















ಮಂಡಳಿಯ ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಡಳಿ ಅಧ್ಯಕ್ಷ ವಿಜಯ ಕುಮಾರ್ ಉಬರಡ್ಕ ಅಧ್ಯಕ್ಷತೆ ವಹಿಸಲಿದ್ದು, ಶಾಸಕಿ ಭಾಗೀರಥಿ ಮುರುಳ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯುವಜನ ಸೇವಾ ಸಂಸ್ಥೆ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಹಾಗೂ ಯುವಜನ ಸೇವಾ ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ ಉಪಸ್ಥಿತರಿರುವರು.
ಸಮಾಜ ಸೇವೆಗಾಗಿ ಅಬ್ದುಲ್ ರಝಾಕ್ ರನ್ನು ಸನ್ಮಾನಿಸಲಾಗುವುದು.










