














ಬೆಳ್ಳಾರೆಯ ಬೇಕರಿಯೊಂದರಲ್ಲಿ ಉದ್ಯೋಗದಲ್ಲಿದ್ದ ಯುವಕನೋರ್ವ ಕಳೆ ನಾಶಕ ಸೇವಿಸಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೆ.18 ರಂದು ನಡೆದಿದೆ.
ಹಾಸನದ ಲೋಕೇಶ ( 24) ಎಂಬವನು ಬೆಳ್ಳಾರೆ ಪೇಟೆಯಲ್ಲಿ ತನ್ನ ಸಂಬಂಧಿಕರ ಬೇಕರಿಯೊಂದರಲ್ಲಿ ಸುಮಾರು 4 ವರ್ಷದಿಂದ ಕೆಲಸ ಮಾಡಿಕೊಂಡಿದ್ದರು.
ಸಂಬಂಧಿಕರ ಮನೆಯಲ್ಲಿಯೇ ವಾಸವಿದ್ದ ಈತ ಸೆ.17 ರಂದು ರಾತ್ರಿ ಇವರು ನೆಲದ ಮೇಲೆ ಬಿದ್ದು ಹೊರಳಾಡುತ್ತಿದ್ದುದನ್ನು ಕಂಡು ಹತ್ತಿರದಲ್ಲಿಯೆ ಕಳೆನಾಶಕದ ಬಾಟಲಿ ಇರುವುದನ್ನು ಗಮನಿಸಿದ ಮನೆಯವರು ಇವರನ್ನು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೆ.18 ರಂದು ರಾತ್ರಿ ಇವರು ಮೃತಪಟ್ಟರೆನ್ನಲಾಗಿದೆ.
ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.










