














ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಸೆ. 23 ರಂದು 10ನೇ ಆಯುರ್ವೇದ ದಿನಾಚರಣೆ ಅಂಗವಾಗಿ ಆಯುರ್ವೇದದ ಕಡೆಗೆ ನಮ್ಮ ನಡೆ ಎಂಬ ಧ್ಯೇಯದೊಂದಿಗೆ ಸಾರ್ವಜನಿಕ ಜಾಥಾ ಕಾರ್ಯಕ್ರಮವನ್ನು ಆಯುಷ್ ಇಲಾಖೆ ಹಾಗೂ ಎನ್.ಸಿ.ಐ.ಎಸ್.ಎಂ ನವದೆಹಲಿಯ ನೇತೃತ್ವದಲ್ಲಿ ಆಯೋಜಿಸಲಾಗಿದೆ. ಜಾಥವು ಪೂರ್ವಾಹ್ನ 9.30 ಕ್ಕೆ ಕೆವಿಜಿ ಆಯುರ್ವೇದ ಕಾಲೇಜಿನ ಮುಂಭಾಗದಿಂದ ಆರಂಭಗೊಂಡು ನಗರದ ಬೀದಿಗಳಲ್ಲಿ ಸಂಚರಿಸಿ ಆಯುರ್ವೇದ ಕಾಲೇಜನ್ನು ತಲುಪಲಿದೆ.
ಹೆಚ್ಚಿನ ಮಾಹಿತಿಗಾಗಿ ಮಿ. ವಿನಯ್ ಕುಮಾರ್ ಬಿ. ಡಿ -7353756066 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ. ಯವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.










